ಮರ ಬಿದ್ದು ಸಂಚಾರ ಸ್ಥಗಿತ

ಕಳಸ-ಬಾಳೆಹೊನ್ನೂರು ಮುಖ್ಯ ರಸ್ತೆಯ ಮಳಲಾಡಿ ಎಂಬಲ್ಲಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದಿರುವುದು.
ಕಳಸ-ಬಾಳೆಹೊನ್ನೂರು ಮುಖ್ಯ ರಸ್ತೆಯ ಮಳಲಾಡಿ ಎಂಬಲ್ಲಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದಿರುವುದು.
Published on
ಕಳಸ: ತಾಲೂಕಿನಲ್ಲಿ ಸೋಮವಾರ ಸಂಜೆ ಸುರಿದ ಸಾಧಾರಣ ಗಾಳಿ ಮಳೆಗೆ ಕಳಸ-ಬಾಳೆಹೊನ್ನೂರು ರಸ್ತೆ ಮಧ್ಯದ ಮಳಲಾಡಿಯಲ್ಲಿ ಬೃಹತ್ ಮರವೊಂದು ರಸ್ತೆಗೆ ಉರುಳಿಬಿದ್ದು ಈ ಮಾರ್ಗದ ಸಂಚಾರ ಕೆಲಕಾಲ ಸ್ಥಗಿತಗೊಂಡಿತ್ತು.
ಕಳಸ ಭಾಗದಲ್ಲಿ ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣವಿದ್ದು ಸಂಜೆಯಾಗುತ್ತಿದ್ದಂತೆ ಸಾಧಾರಣ ಮಳೆಯೊಂದಿಗೆ ಬಿರುಗಾಳಿ ಬೀಸಲಾರಂಭಿಸಿತು. ಗಾಳಿಯ ವೇಗಕ್ಕೆ ರಸ್ತೆ ಬದಿಯಲ್ಲಿದ್ದ ಬೃಹತ್ ಮರವೊಂದು ಮಳಲಾಡಿ ಸಮೀಪ ಮುಖ್ಯರಸ್ತೆಗೆ ಅಡ್ಡಲಾಗಿ ಬಿದ್ದಿದೆ.
ರಸ್ತೆಗೆ ಮರ ಬಿದ್ದ ಪರಿಣಾಮ ಕಳಸ ಮತ್ತು ಬಾಳೆಹೊನ್ನೂರು ನಡುವೆ ಸಂಚರಿಸುವ ವಾಹನಗಳು ರಸ್ತೆಯ ಎರಡೂ ಬದಿಗಳಲ್ಲಿ ಸಾಲುಗಟ್ಟಿ ನಿಂತಿದ್ದವು. ಇದರಿಂದಾಗಿ ಪ್ರಯಾಣಿಕರು ಮತ್ತು ವಾಹನ ಸವಾರರು ಕೆಲ ಕಾಲ ಪರದಾಡುವಂತಾಯಿತು. ಸ್ಥಳೀಯರು ಮತ್ತು ವಾಹನ ಸವಾರರು ಮರವನ್ನು ತೆರವುಗೊಳಿಸಲು ಹರಸಾಹಸಪಟ್ಟರು. ಸದ್ಯ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net