ಹುಲಿಕೆರೆ ದೊಡ್ಡಮಠದ ಶ್ರೀ ವಿರೂಪಾಕ್ಷಲಿಂಗ ಶಿವಾಚಾರ್ಯ ಸ್ವಾಮಿಗಳು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಶ್ರೀ ಜಗದ್ಗುರು ರೇಣುಕಾಚಾರ್ಯ ಟ್ರಸ್ಟಿನ ಪದಾಧಿಕಾರಿಗಳಾದ ಯು.ಎಂ.ಬಸವರಾಜ್, ಎಂ.ಡಿ.ಪುಟ್ಟಸ್ವಾಮಿ, ಎಸ್.ಎಂ.ದೇವಣ್ಣಗೌಡ ಸೇರಿದಂತೆ ಸರ್ವ ಸದಸ್ಯರು ಪಾಲ್ಗೊಂಡಿದ್ದರು. ಬಾಳೆಹೊನ್ನೂರು ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲ ಸಾಧಕರಿಂದ ವೇದಘೋಷ ಜರುಗಿತು. ಎಚ್.ಎನ್.ನಂಜೇಗೌಡ ಸರ್ವರನ್ನು ಸ್ವಾಗತಿಸಿದರು. ಪಾರ್ವತಿ ಮಹಿಳಾ ಬಳಗ ಮತ್ತು ಅಕ್ಕಮಹಾದೇವಿ ಸಂಘದ ಸದಸ್ಯರು ಪ್ರಾರ್ಥನೆ ಸಲ್ಲಿಸಿದರು. ಬಿ.ಎ.ಶಿವಶಂಕರ್ ನಿರೂಪಿಸಿದರು. ಕಾರ್ಯದರ್ಶಿ ಸಿ.ವಿ.ಮಲ್ಲಿಕಾರ್ಜುನ್, ವಂದನಾರ್ಪಣೆ ಸಲ್ಲಿಸಿದರು.