ಪಾಗಲ್ ಪ್ರೇಮಿಯಿಂದ ಮಾರಣಾಂತಿಕ ಹಲ್ಲೆ

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on

ಪ್ರಮುಖ ಮುಖ್ಯಾಂಶಗಳು

  • ಮದುವೆಯಾಗಲು ನಿರಾಕರಿಸಿದ ಯುವತಿ
  • ಕಬ್ಬಿಣದ ರಾಡ್‌ನಿಂದ ಮಾರಣಾಂತಿಕ ಹಲ್ಲೆ
ಚಿಕ್ಕಮಗಳೂರು: ಪ್ರೀತಿಸಲು ಹಾಗೂ ಮದುವೆಯಾಗಲು ನಿರಾಕರಿಸಿದ ಯುವತಿ ಹಾಗೂ ಆಕೆಯ ತಾಯಿ ಮೇಲೆ ಪಾಗಲ್ ಪ್ರೇಮಿಯೊಬ್ಬ ಕಬ್ಬಿಣದ ರಾಡ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಗುರುವಾಗ ಚಿಕ್ಕಮಗಳೂರಿನ ಮಾರ್ಕೆಟ್ ರಸ್ತೆ ಬಳಿ ನಡೆದಿದೆ. ಹಲ್ಲೆ ನಡೆಸಿದ ಬಳಿಕ ಆರೋಪಿ ನಗರ ಠಾಣೆಗೆ ಆಗಮಿಸಿ ಶರಣಾಗಿದ್ದಾನೆ.
ಶಂಕರಪುರ ನಿವಾಸಿ ಕುಮಾರ್ ಹಲ್ಲೆ ನಡೆಸಿದ ಆರೋಪಿ. ಲಕ್ಷಿö್ಮÃ ಹಾಗೂ ಅವರ ಪುತ್ರಿ ಕೃಪಾ ಮಾರಣಾಂತಿಕ ಹಲ್ಲೆಗೆ ಒಳಗಾದವರು. ಕುಮಾರ್ ಕೆಲ ದಿನಗಳಿಂದ ಕೃಪಾಳನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಅಲ್ಲದೆ ಆಕೆಯ ಮನೆಗೆ ಬಂದು ನಿಮ್ಮ ಮಗಳನ್ನು ನನಗೆ ಮದುವೆ ಮಾಡಿಕೊಡಿ ಎಂದು ಲಕ್ಷಿö್ಮÃ ಅವರನ್ನೂ ಪೀಡಿಸುತ್ತಿದ್ದ ಎನ್ನಲಾಗಿದೆ. ಆದರೆ ಕೃಪಾ ಪ್ರೀತಿಯನ್ನು ನಿರಾಕರಿಸಿದ್ದಲ್ಲದೆ ಮದುವೆಯಗಲೂ ಒಪ್ಪಿರಲಿಲ್ಲ ಎನ್ನಲಾಗಿದೆ.
ಇದರಿಂದ ಸಿಟ್ಟಿಗೆದ್ದ ಕುಮಾರ್ ಗುರುವಾರ ತಾಯಿ ಮಗಳು ಸ್ಕೂಟಿಯಲ್ಲಿ ಬರುವಾಗ ಏಕಾಏಕಿ ಅವರ ಮೇಲೆ ದಾಳಿ ನಡೆಸಿದ್ದಾನೆ. ಈ ವೇಳೆ ತಪ್ಪಿಸಿಕೊಳ್ಳಲು ಸಮೀಪದಲ್ಲೇ ಇದ್ದ ಶಾಲಾ ಕಾಂಪೌAಡ್ ಒಳಗೆ ಓಡಿ ಹೋದರೂ ಬಿಡದೆ ಅಡ್ಡಾಡಿಸಿಕೊಂಡು ಹೋಗಿ ಕಬ್ಬಿಣದ ರಾಡ್‌ನಿಂದ ತಾಯಿ ಮಗಳ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಸಂಬAಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net