ಬಿಜೆಪಿಗೆ ದೇಶವೇ ದೊಡ್ಡದು

ಎನ್.ಆರ್.ಪುರದಲ್ಲಿ ಬಿಜೆಪಿಯಿಂದ ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಡಿ.ಎನ್.ಜೀವರಾಜ್ ಮಾತನಾಡಿದರು. ದಿನೇಶ್ ದೇವವೃಂದ, ಪುಣ್ಯಪಾಲ್, ಅರುಣಕುಮಾರ್ ಇತರರಿದ್ದರು.
ಎನ್.ಆರ್.ಪುರದಲ್ಲಿ ಬಿಜೆಪಿಯಿಂದ ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಡಿ.ಎನ್.ಜೀವರಾಜ್ ಮಾತನಾಡಿದರು. ದಿನೇಶ್ ದೇವವೃಂದ, ಪುಣ್ಯಪಾಲ್, ಅರುಣಕುಮಾರ್ ಇತರರಿದ್ದರು.
Published on
ಎನ್.ಆರ್.ಪುರ: ಬಿಜೆಪಿ ಕಾರ್ಯಕರ್ತರಿಗೆ ಮೊದಲು ದೇಶ, ನಂತರ ಪಕ್ಷ ಮತ್ತು ವ್ಯಕ್ತಿ ಎಂಬುದನ್ನು ಕಲಿಸಲಾಗುತ್ತದೆ ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್ ಹೇಳಿದರು.
ಅಗ್ರಹಾರದ ಉಮಾಮಹೇಶ್ವರ ಸಭಾಭವನದಲ್ಲಿ ಬಿಜೆಪಿ ಭಾನುವಾರ ಏರ್ಪಡಿಸಿದ್ದ ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ ಉದ್ಘಾಟಿಸಿ ಮಾತನಾಡಿದರು.
ಕಾಶ್ಮೀರದಲ್ಲಿ ಭಾರತದ ಧ್ವಜ ಹಾರಿಸಲು ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ವಾಜಪೇಯಿ ಹೋಗಬೇಕಾಯಿತು. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ದುಡಿದ ಪರಿಣಾಮವಾಗಿ ಸ್ವಂತ ಬಲದಿಂದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿದೆ ಎಂದರು.
ತಾಲೂಕು ಬಿಜೆಪಿ ಅಧ್ಯಕ್ಷ ವಿ.ನೀಲೇಶ್ ಮಾತನಾಡಿ, ಬಿಜೆಪಿ ತಳಮಟ್ಟದಿಂದ ಸಂಘಟನೆ ಮಾಡುವ ಉದ್ದೇಶದಿಂದ 7 ಅಭ್ಯಾಸ ವರ್ಗ ಮಾಡಲಾಗುತ್ತಿದೆ. ಜಿಲ್ಲೆಯ ವಿವಿಧ ತಾಲೂಕಿನಿಂದ ಸಂಪನ್ಮೂಲ ವ್ಯಕ್ತಿಗಳು ಆಗಮಿಸಿದ್ದಾರೆ ಎಂದು ಹೇಳಿದರು.
 ರಾಷ್ಟ್ರೀಯ ಕಾಫಿ ಮಂಡಳಿ ಅಧ್ಯಕ್ಷ ದಿನೇಶ್ ದೇವವೃಂದ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಣ್ಯಪಾಲ್, ಜಿಲ್ಲಾ ಕಾರ್ಯದರ್ಶಿ ಅರುಣಕುಮಾರ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಭಾಸ್ಕರ್ ವೆನಿಲ್ಲಾ, ರಾಜ್ಯ ಅಲ್ಪಸಂಖ್ಯಾತರ ವಿಭಾಗದ ಕಾರ್ಯಕಾರಿ ಸದಸ್ಯ ಪರ್ವೀಜ್, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ದಯಾನಂದ್, ಪ್ರಮುಖರಾದ ಕೆಸವಿ ಮಂಜುನಾಥ್, ಪ್ರಭಾಕರ ಪ್ರಣಸ್ವಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net