ಅವಿರತ ಶ್ರಮದಿಂದ ರೋಗಮುಕ್ತ

ಲಕ್ಕವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯಕರ್ತೆಯೊಬ್ಬರು ಮಗುವಿಗೆ ಪೋಲಿಯೋ ಹನಿ ಹಾಕಿದರು.
ಲಕ್ಕವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯಕರ್ತೆಯೊಬ್ಬರು ಮಗುವಿಗೆ ಪೋಲಿಯೋ ಹನಿ ಹಾಕಿದರು.
Published on

ಪ್ರಮುಖ ಮುಖ್ಯಾಂಶಗಳು

  • ಎಚ್ಚರಿಕೆ ವಹಿಸಬೇಕಿದೆ.
  • ಗಂಭೀರ ವೈರಸ್
ತರೀಕೆರೆ: ಆರೋಗ್ಯ ಇಲಾಖೆ, ರೋಟರಿ ಕ್ಲಬ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅವಿರತ ಶ್ರಮದಿಂದ ದೇಶದಲ್ಲಿ ಪೋಲಿಯೋ ನಿರ್ಮೂಲನೆಯಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಪಾಕಿಸ್ತಾನ ಮತ್ತು ಅ್ಘಾನಿಸ್ತಾನದಲ್ಲಿ ಪೋಲಿಯೋ ಪ್ರಕರಣಗಳು ಕಂಡುಬರುತ್ತಿದ್ದು, ನಾವು ಎಚ್ಚರಿಕೆ ವಹಿಸಬೇಕಿದೆ. ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ತಿಳಿಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ. ಬಿ.ಜಿ.ಚಂದ್ರಶೇಖರ್ ಮಾತನಾಡಿ, ಪೋಲಿಯೋ ಮಕ್ಕಳಲ್ಲಿ ಶಾಶ್ವತ ಅಂಗವೈಕಲ್ಯ ಉಂಟು ಮಾಡುವ ಗಂಭೀರ ವೈರಸ್ ಕಾಯಿಲೆಯಾಗಿದೆ. ದೇಶದಲ್ಲಿ 2012ನೇ ಸಾಲಿನಿಂದ ಈವರೆಗೆ ಒಂದೂ ಪ್ರಕರಣ ಕಂಡು ಬಂದಿಲ್ಲವಾದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ ವಿಶೇಷ ಲಸಿಕಾ ಅಭಿಯಾನ ಮುಂದುವರಿಸಲಾಗುತ್ತಿದೆ ಎಂದರು.
ತರೀಕೆರೆ ಹಾಗೂ ಅಜ್ಜಂಪುರ ತಾಲೂಕಿನಲ್ಲಿ 129 ಬೂತ್ ಮೂಲಕ ಒಟ್ಟು 15,527 ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಗುರಿ ಹೊಂದಲಾಗಿದೆ. 516 ಲಸಿಕಾ ಕಾರ್ಯಕರ್ತರು 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕಲಿದ್ದಾರೆ ಎಂದು ತಿಳಿಸಿದರು.
ಪುರಸಭೆ ಉಪಾಧ್ಯಕ್ಷೆ ಶಮೀಮ್ ಬಾನು, ಸಿಡಿಪಿಒ ಎನ್.ಚರಣ್‌ರಾಜ್, ರೋಟರಿ ಕ್ಲಬ್ ಕಾರ್ಯದರ್ಶಿ ಪಿ.ಪ್ರವೀಣ್, ಸದಸ್ಯರಾದ ಡಾ. ಗಿರೀಶ್, ಡಾ. ಜಿ.ಸಿ.ಶರತ್, ಆರೋಗ್ಯ ರಕ್ಷಾ ಸಮಿತಿ ಸದಸ್ಯೆ ವನಜಾಕ್ಷಿ, ಮಕ್ಕಳ ತಜ್ಞ ಡಾ. ದೇವಾನಂದ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಶಿವಪ್ಪ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net