2021ರ ಡಿಸೆಂಬರ್‌ನಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಎಂ.ಕೆ. ಪ್ರಾಣೇಶ್ ಅವರು 1,188 ಮತಗಳನ್ನು ಪಡೆದು, ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಅವರನ್ನು ಕೇವಲ 6 ಮತಗಳ ಅಂತರದಿಂದ ಸೋಲಿಸಿದ್ದರು. ಗಾಯತ್ರಿ ಶಾಂತೇಗೌಡ ಅವರು 1,182 ಮತಗಳನ್ನು ಪಡೆದಿದ್ದರು.