ಅಂಗವಿಕಲ ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ನೀಡಿ

ಎನ್.ಆರ್.ಪುರದ ಬಸ್ತಿಮಠದ ಸರ್ಕಾರಿ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ವಿಶ್ವ ಅಂಗವಿಕಲ ಮಕ್ಕಳ ದಿನಾಚರಣೆಯಲ್ಲಿ ಅಂಗವಿಕಲ ಮಕ್ಕಳ ತಾಯಂದಿರನ್ನು ಸನ್ಮಾನಿಸಲಾಯಿತು. ವೇಣುಗೋಪಾಲ್, ಎ.ಇ.ಅಶೋಕ್, ಸೇವ್ಯಾನಾಯ್ಕಾ, ತಿಮ್ಮೇಶ್, ದೇವರಾಜ್, ಅನಂತಪ್ಪ, ಅನಿಲ್, ನೇತ್ರಾವತಿ ಇದ್ದರು.
ಎನ್.ಆರ್.ಪುರದ ಬಸ್ತಿಮಠದ ಸರ್ಕಾರಿ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ವಿಶ್ವ ಅಂಗವಿಕಲ ಮಕ್ಕಳ ದಿನಾಚರಣೆಯಲ್ಲಿ ಅಂಗವಿಕಲ ಮಕ್ಕಳ ತಾಯಂದಿರನ್ನು ಸನ್ಮಾನಿಸಲಾಯಿತು. ವೇಣುಗೋಪಾಲ್, ಎ.ಇ.ಅಶೋಕ್, ಸೇವ್ಯಾನಾಯ್ಕಾ, ತಿಮ್ಮೇಶ್, ದೇವರಾಜ್, ಅನಂತಪ್ಪ, ಅನಿಲ್, ನೇತ್ರಾವತಿ ಇದ್ದರು.
Published on
ಎನ್.ಆರ್.ಪುರ: ಅಂಗವಿಕಲ ಮಕ್ಕಳಿಗೆ ಅನುಕಂಪಕ್ಕಿಂತ ಹೆಚ್ಚು ಅವಕಾಶಗಳನ್ನು ನೀಡಬೇಕು ಎಂದು ಉಪ ತಹಸೀಲ್ದಾರ್ ವೇಣುಗೋಪಾಲ್ ಹೇಳಿದರು.
 ಬುಧವಾರ ಬಸ್ತಿಮಠದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆಶ್ರಯದಲ್ಲಿ ಏರ್ಪಡಿಸಿದ್ದ ತಾಲೂಕು ಮಟ್ಟದ ವಿಶ್ವ ಅಂಗವಿಕಲ ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಅಂಗವಿಕಲ ಮಕ್ಕಳು ದೇವರಿಗೆ ಸಮಾನ. ಅವರ ಆರೈಕೆ ಮಾಡುವುದು ನಮ್ಮೆಲ್ಲರ ಕರ್ತವ್ಯದ ಜತೆಗೆ ಭಾಗ್ಯವೂ ಆಗಿದೆ ಎಂದರು.
ತಾಲೂಕು ಬಡ್ತಿ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಎ.ಇ.ಅಶೋಕ್ ಮಾತನಾಡಿ, ಅಂಗವಿಕಲ ಮಕ್ಕಳಲ್ಲಿ ವಿಶೇಷ ಸಾಮರ್ಥ್ಯ ಇರುತ್ತದೆ. ಇಂಥ ಮಕ್ಕಳಿಗೆ ಎಲ್ಲ ಕ್ಷೇತ್ರಗಳಲ್ಲಿ ಅವಕಾಶ ನೀಡಬೇಕು. ಅವರಲ್ಲೂ ಭಾವನೆಗಳು ಇರುತ್ತವೆ. ಅದನ್ನು ಅರ್ಥ ಮಾಡಿಕೊಂಡು ಶಿಕ್ಷಣ ನೀಡಬೇಕು ಎಂದು ತಿಳಿಸಿದರು.
ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಸೇವ್ಯಾನಾಯ್ಕಾ ಮಾತನಾಡಿ, ಶಿಕ್ಷಣ ಇಲಾಖೆಯು ಅಂಗವಿಕಲ ಮಕ್ಕಳಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು, ಮಕ್ಕಳು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. 
ನೋಡಲ್ ಅಧಿಕಾರಿ ತಿಮ್ಮೇಶ್ ಮಾತನಾಡಿ, ಡಿ.10ರಂದು ತಾಲೂಕುಮಟ್ಟದ ಅಂಗವಿಕಲ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ ನಡೆಯಲಿದೆ. ಎಲ್ಲ ಮಕ್ಕಳು ಪಾಲಕರೊಂದಿಗೆ ಆಗಮಿಸಿ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.
 ಸಿಆರ್‌ಪಿ ದೇವರಾಜ್ ಮಾತನಾಡಿ, ಅಂಗವಿಕಲ ಮಕ್ಕಳಿಗೆ ವಿಶೇಷ ಶ್ರವಣ ಶಕ್ತಿ ಗುರುತಿಸುವ ಕೌಶಲ, ಜ್ಞಾನ ಇರುತ್ತದೆ. ಅವರಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದು ಹೇಳಿದರು. ಅಂಗವಿಕಲ ಮಕ್ಕಳ ತಾಯಂದಿರನ್ನು ಸನ್ಮಾನಿಸಲಾಯಿತು. ವಿಶ್ವ ಅಂಗವಿಕಲ ದಿನಾಚರಣೆ ಅಂಗವಾಗಿ ಮಕ್ಕಳಿಗೆ ಹಾಗೂ ಪಾಲಕರಿಗೆ ವಿವಿಧ ಕ್ರೀಡೆಗಳನ್ನು ನಡೆಸಿ ಗೆದ್ದವರಿಗೆ ಬಹುಮಾನ ವಿತರಿಸಲಾಯಿತು.
ಶಿಕ್ಷಣ ಸಂಯೋಜಕ ರಂಗಪ್ಪ, ಸಿಆರ್‌ಪಿ ಅನಂತಪ್ಪ, ತಾಲೂಕು ಕಚೇರಿಯ ಅನಿಲ್, ಮುಖ್ಯಶಿಕ್ಷಕಿ ನೇತ್ರಾವತಿ, ಮಮತಾ, ಶಾಲಿನಿ, ಸುಲೋಚನಾ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net