ಸರ್ವೇ ನಡೆಸುತ್ತಿದ್ದ ಸ್ಥಳದಲ್ಲಿ ಕಸಬಾ ರಾಜಸ್ವ ನಿರೀಕ್ಷಕ ಚಂದ್ರಶೇಖರ್ ಸುದ್ದಿಗಾರರೊಂದಿಗೆ ಮಾತನಾಡಿ, ಸಣ್ಣ ನೀರಾವರಿ ಇಲಾಖೆಗೆ ಸೇರಿದ ಕೆರೆಯ ಸುತ್ತಮುತ್ತಲ ಜಾಗ ಒತ್ತುವರಿ ನಡೆದಿರುವುದಾಗಿ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸರ್ವೇ ನಡೆಸಲಾಗಿದೆ. ಜಿಪಿಎಸ್ ತಂತ್ರಜ್ಞಾನದ ಸಹಾಯದಿಂದ ಕೆರೆಯ ನಿಖರ ವ್ಯಾಪ್ತಿ ಗುರುತಿಸಲಾಗಿದೆ. ಅದನ್ನು ಸರ್ಕಾರಿ ದಾಖಲೆಗಳೊಂದಿಗೆ ಹೋಲಿಕೆ ಮಾಡಲಾಗುವುದು. ಭೂಮಾಪನ ವರದಿ ಸಿದ್ಧವಾದ ನಂತರ ಜಾಗ ಒತ್ತುವರಿಯಾಗಿರುವುದು ದೃಢಪಡಲಿದೆ. ನಂತರ ಸಂಬಂಧಪಟ್ಟ ಒತ್ತುವರಿದಾರರಿಗೆ ನೋಟಿಸ್ ನೀಡಿ ಕಾನೂನು ಪ್ರಕಾರ ತೆರವು ಕಾರ್ಯಾಚರಣೆ ನಡೆಸಲಾಗುವುದು ಎಂದು ತಿಳಿಸಿದರು.