ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ

ಕ್ರೈಂ
ಕ್ರೈಂ
Published on
ಚಿಕ್ಕಮಗಳೂರು:
ಎರಡು ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಹೊರವಲಯದ ಗವನಹಳ್ಳಿ ಶಾಲೆಯ ಮುಂಭಾಗ ನಡೆದಿದೆ.
ವಿಕಾಸ್ ಎನ್ನುವರು ಚಾಲನೆ ಮಾಡುತ್ತಿದ್ದ ಕಾರಿನಲ್ಲಿ ಲೋಹಿತ್ ಹಾಗೂ ರಮೇಶ್ ಎಂಬುವರು ಇದ್ದರು. ಇವರು ಗಡಬನಹಳ್ಳಿಯಿಂದ ಕಾರಿನಲ್ಲಿ ಬರುವಾಗ ಓನ್ ವೇನಲ್ಲಿ ವೇಗವಾಗಿ ಬಂದ ಕಾರು ವಿಕಾಸ್ ಚಾಲನೆ ಮಾಡುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎರಡೂ ಕಾರುಗಳು ಜಖಂಗೊಂಡಿದ್ದು, ಲೋಹಿತ್, ವಿಕಾಸ್, ರಮೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಲೋಹಿತ್ ಚಿಕ್ಕಮಗಳೂರು ಅನ್ನಪೂರ್ಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇನ್ನಿಬ್ಬರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಅಪಘಾತದ ಭೀಕರತೆಯಿಂದ ಹೆದರಿದ ವಿರುದ್ಧ ದಿಕ್ಕಿನಲ್ಲಿ ಬಂದು ಡಿಕ್ಕಿ ಹೊಡೆದ ಕಾರಿನ ಚಾಲಕ ಕಾರನ್ನು ಬಿಟ್ಟು ಪರಾರಿಯಾಗಿದ್ದಾನೆ. ಈ ಸಂಬಂಧ ಚಿಕ್ಕಮಗಳೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net