ಕಡೂರು ಕಾಲೇಜಿನಲ್ಲಿ ಹಾಸ್ಟೆಲ್ ಸೌಲಭ್ಯ

ಕಡೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನೂತನ ಕಟ್ಟಡಗಳನ್ನು ಶಾಸಕ ಕೆ.ಎಸ್.ಆನಂದ್ ಉದ್ಘಾಟಿಸಿದರು. ತವರಾಜ್, ಬಸವರಾಜ್‌ನಾಯ್ಕ, ಕೆ.ಜಿ.ಶ್ರೀನಿವಾಸಮೂರ್ತಿ, ಮಂಜುನಾಥ್ ಇತರರಿದ್ದರು.
ಕಡೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನೂತನ ಕಟ್ಟಡಗಳನ್ನು ಶಾಸಕ ಕೆ.ಎಸ್.ಆನಂದ್ ಉದ್ಘಾಟಿಸಿದರು. ತವರಾಜ್, ಬಸವರಾಜ್‌ನಾಯ್ಕ, ಕೆ.ಜಿ.ಶ್ರೀನಿವಾಸಮೂರ್ತಿ, ಮಂಜುನಾಥ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕೆಪಿಎಸ್‌ಗೆ ಸೇರಿಸಿ
  • ಮೇಲ್ದರ್ಜೆಗೆ ಏರಿಸಲಾಗಿದೆ.
ಕಡೂರು: ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಸುಧಾರಣೆಗೊಳ್ಳಲು ಹೆಚ್ಚು ಒತ್ತು ಕೊಡಲಾಗುತ್ತಿದೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.
ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸುಮಾರು 2.83 ಕೋಟಿ ರೂ. ವೆಚ್ಚದ ಎರಡು ಸುಸಜ್ಜಿತ ಕಟ್ಟಡಗಳನ್ನು ಉದ್ಘಾಟಿಸಿ ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿವೇಕ ಯೋಜನೆಯಡಿ 1.25 ಕೋಟಿ ರೂ. ವೆಚ್ಚದಲ್ಲಿ ನೂತನ ಹಾಗೂ ನಬಾರ್ಡ್ ಯೋಜನೆ 1.58 ಕೋಟಿ ರೂ. ವೆಚ್ಚದ ಕಟ್ಟಡಗಳನ್ನು ನಿರ್ಮಿಸಲಾಗಿದೆ ಎಂದರು.
ನೂತನ ಕಟ್ಟಡದಲ್ಲಿ ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಹಾಗೂ ನೀಟ್ ಸಿಇಟಿ ವಿದ್ಯಾಭ್ಯಾಸಕ್ಕೆ ಎರಡು ಕೊಠಡಿಗಳನ್ನು ಮೀಸಲಿಡಲಾಗಿದೆ. ಎರಡು ಶೌಚಗೃಹಗಳು ನಿರ್ಮಾಣಗೊಂಡಿದ್ದು, ಇನ್ನೊಂದು ಶೌಚಗೃಹ ನಿರ್ಮಾಣವಾಗಬೇಕಿದೆ. ಮಳೆ ಬಂದರೆ ಕೆರೆಯಂತಾಗುವ ಕಾಲೇಜು ಆವರಣಕ್ಕೆ ನೆಲಹಾಸು ಹಾಕಿಸಲಾಗುವುದು. ಕಾಲೇಜನ್ನು ಕೆಪಿಎಸ್‌ಗೆ ಸೇರಿಸಿ ಮೇಲ್ದರ್ಜೆಗೆ ಏರಿಸಲಾಗಿದೆ. ಪ್ರೌಢಶಾಲಾ ವಿಭಾಗಕ್ಕೆ ನೂತನ ಕಟ್ಟಡ ನಿರ್ಮಾಣಕ್ಕಾಗಿ 5 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಕಾಲೇಜು ಆವರಣದಲ್ಲಿ ಹಾಸ್ಟೆಲ್ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು. ಸುಸಜ್ಜಿತ ಕಟ್ಟಡಗಳ ನಿರ್ಮಾಣಕ್ಕೆ ಮೂರೂವರೆ ಕೋಟಿ ರೂ. ಮಂಜೂರಾಗಿದ್ದು ಟೆಂಡರ್ ಪ್ರಕ್ರಿಯೆ ಶೀಘ್ರದಲ್ಲೇ ನಡೆಯಲಿದೆ ಎಂದರು
ಕಾಲೇಜಿನ ಪ್ರಾಚಾರ್ಯ ತವರಾಜ್, ಪಿಡಬ್ಲುೃಡಿ ಎಇಇ ಬಸವರಾಜ್ ನಾಯ್ಕ, ಎಸ್‌ಡಿಎಂಸಿ ಸದಸ್ಯರಾದ ಈರುಳ್ಳಿ ರಮೇಶ್, ಎನ್.ಎಚ್.ನಂಜುಂಡಸ್ವಾಮಿ, ಕೆ.ಜಿ.ಶ್ರೀನಿವಾಸಮೂರ್ತಿ, ಮಂಜುನಾಥ್, ಗುತ್ತಿಗೆದಾರರಾದ ಕಂಸಾಗರ ಶೇಖರಪ್ಪ, ಗಿರೀಶ್, ಪ್ರಸನ್ನ ಹಾಗೂ ಕಾಲೇಜಿನ ಉಪನ್ಯಾಸಕರು  ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net