ವಿದ್ಯೆಯಿಂದ ವಿನಯತೆ, ವಿವೇಕದ ಜ್ಞಾನ ಲಭ್ಯ

ಜೆಸಿಬಿಎಂ ಕಾಲೇಜಿನಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಜೆಸಿಬಿಎಂ ಕಾಲೇಜಿನಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
Published on
ಶೃಂಗೇರಿ: ಸಮಾಜದಲ್ಲಿ ಬೆಳೆಯುತ್ತಿರುವ ಯುವ ಪೀಳಿಗೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮನ್ನಣೆ ನೀಡುವುದು ಅಗತ್ಯ ಎಂದು ಶೃಂಗೇರಿಯ ಜೆಎಂಎ್ಸಿ ನ್ಯಾಯಾಲಯದ ನ್ಯಾಯಾಧೀಶ ಆರ್.ಎಸ್.ಜೀತು ಹೇಳಿದರು.
ಶೃಂಗೇರಿ ಜೆಸಿಬಿಎಂ ಕಾಲೇಜಿನಲ್ಲಿ ರೋಟರಿ ಮತ್ತು ಇನ್ನರ್‌ವೀಲ್ ಕ್ಲಬ್ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದ ಅಶ್ರಯದಲ್ಲಿ ಆಯೋಜಿಸಿದ್ಧ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾವಂತರಿಗೆ ಎಲ್ಲೆಡೆ ಗೌರವ ದೊರಕುತ್ತದೆ. ವಿದ್ಯೆಯಿಂದ ವಿನಯತೆ, ವಿವೇಕದ ಜ್ಞಾನ ಲಭಿಸುತ್ತದೆ. ಶಿಕ್ಷಣ ನಮ್ಮ ಮೊದಲ ಆದ್ಯ ಕರ್ತವ್ಯವಾಗಿದ್ದು , ವಿದ್ಯಾರ್ಥಿ ಜೀವನದಲ್ಲಿ ಉದಾಸೀನ ತೋರದೆ ಪ್ರಗತಿ ಸಾಧಿಸಬೇಕು. ಹದಿಹರೆಯದ ವಯಸ್ಸಿನಲ್ಲಿ ಚಂಚಲ ಮನಸ್ಸು ಇರುತ್ತದೆ. ಏಕಾಗ್ರತೆಯಿಂದ ವ್ಯಾಸಂಗ ಮಾಡಿದರೆ ಮಾತ್ರ ಲ ದೊರಕುತ್ತದೆ ಎಂದರು.
ಜೆಸಿಬಿಎಂ ಕಾಲೇಜಿನ ಪ್ರಾಚಾರ್ಯ ಡಾ.ಎಂ.ಸ್ವಾಮಿ ಮಾತನಾಡಿ, ಸರ್ಕಾರದ ಉನ್ನತ ಹುದ್ದೆಗಳಲ್ಲಿ ಮಲೆನಾಡಿನ ವಿದ್ಯಾರ್ಥಿಗಳು ಹೆಚ್ಚಿನ ಸಾಧನೆ ಮಾಡಿ ಅತ್ಯುನ್ನತ ಹುದ್ದೆ ಪಡೆಯುವಂತಾಗಬೇಕು. ಕೇವಲ ಶಿಕ್ಷಣದಲ್ಲಿ ಮಾತ್ರವಲ್ಲದೆ ಸಾಮಾಜಿಕವಾಗಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು. ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರದಲ್ಲಿಯೂ ತೊಡಗಿಸಿಕೊಂಡು ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳಬೇಕು. ಪ್ರತಿ ದಿನವೂ ದಿನಪತ್ರಿಕೆಗಳನ್ನು ಓದಬೇಕು. ಗ್ರಂಥಾಲಯದಲ್ಲಿ ಶ್ರೇಷ್ಠ ಸಾಹಿತಿಗಳ ಪುಸ್ತಕವನ್ನು ಓದಬೇಕು ಎಂದು ಸಲಹೆ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net