ಬಿಜೆಪಿಗೆ ಕೋಟೆ ಕೃಷ್ಣ ಗುಡ್ ಬೈ

ಚಿಕ್ಕಮಗಳೂರು ನಗರ ಬಿಜೆಪಿ ಅಧ್ಯಕ್ಷ ಕೆ.ಎಸ್.ಪುಷ್ಪರಾಜ್ ಅವರಿಗೆ ಬಿಜೆಪಿ ಮುಖಂಡ ಕೋಟೆ ಕೃಷ್ಣ ತಮ್ಮ ಬಿಜೆಪಿ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
ಚಿಕ್ಕಮಗಳೂರು ನಗರ ಬಿಜೆಪಿ ಅಧ್ಯಕ್ಷ ಕೆ.ಎಸ್.ಪುಷ್ಪರಾಜ್ ಅವರಿಗೆ ಬಿಜೆಪಿ ಮುಖಂಡ ಕೋಟೆ ಕೃಷ್ಣ ತಮ್ಮ ಬಿಜೆಪಿ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಕಾಫಿ ನಾಡಿನ ಬಿಜೆಪಿ ಪ್ರಭಾವಿ ಮುಖಂಡ
  • ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ
ಚಿಕ್ಕಮಗಳೂರು: ಕಾಫಿ ನಾಡಿನ ಬಿಜೆಪಿ ಪ್ರಭಾವಿ ಮುಖಂಡ ಹಾಗೂ ಆರಂಭದಿAದಲೂ ಸಿ.ಟಿ.ರವಿ ಅವರೊಂದಿಗೆ ಗುರುತಿಸಿಕೊಂಡಿದ್ದ ಹಿರಿಯ ಮುಖಂಡ ಕೋಟೆ ಕೃಷ್ಣ ಅವರು ಗುರುವಾರ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಬಿಜೆಪಿ ನಗರಾಧ್ಯಕ್ಷ ಕೆ.ಎಸ್.ಪುಷ್ಪರಾಜ್ ಅವರನ್ನು ಭೇಟಿ ಮಾಡಿದ ಕೋಟೆ ಕೃಷ್ಣ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಪತ್ರ ನೀಡಿದ್ದಾರೆ. ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿz್ದೆÃನೆ. ಪಕ್ಷಕ್ಕೆ ಮಾಡಿದ ನನ್ನ ಸೇವೆಯನ್ನು ಗುರುತಿಸಿ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನವನ್ನು ನೀಡಲಾಗಿತ್ತು. ಆದರೆ ವೈಯಕ್ತಿಕ ಕಾರಣದಿಂದಾಗಿ ಇದೀಗ ತಮ್ಮ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಪತ್ರ ಸಲ್ಲಿಸುತ್ತಿರುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ.
ಆರೋಗ್ಯ ಸಮಸ್ಯೆಯಿಂದಾಗಿ ನನಗೆ ಪಕ್ಷದಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸಲು ಹಾಗೂ ಪಕ್ಷ ಸಂಘಟನೆ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ರಾಜಕೀಯ ನಿವೃತ್ತಿ ಪಡೆಯಲು ಬಯಸಿದ್ದು, ಇದೇ ಕಾರಣದಿಂದ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಮುಕ್ತಗೊಳಿಸುವಂತೆ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಅಂತರಕಾಯ್ದುಕೊAಡಿದ್ದ ನಾಯಕ:
ಚಿಕ್ಕಮಗಳೂರು ನಗರದ ಮಟ್ಟಿಗೆ ಬಿಜೆಪಿ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದವರು ಕೋಟೆ ಕೃಷ್ಣ. ಆದರೆ ಕಳೆದ ಒಂದು ವರ್ಷದಿಂದ ಕೋಟೆ ಕೃಷ್ಣ ಅವರು ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದರು. ಪಕ್ಷದ ಯಾವುದೇ ವೇದಿಕೆಗಳಲ್ಲಿಯೂ ಕಾಣಿಸಿಕೊಳ್ಳದೆ ಅಜ್ಞಾತರಾಗಿಯೇ ಉಳಿದಿದ್ದರು. ಇದೀಗ ಏಕಾಏಕಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ.
ಕೋಟೆ ಕೃಷ್ಣ ಅವರ ಪತ್ನಿ ಉಮಾದೇವಿ ಕೃಷ್ಣ ಬಿಜೆಪಿಯಿಂದ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಇದಲ್ಲದೆ ನಗರಸಭೆ ಕೊನೆ ಅವಧಿ ಅಧ್ಯಕ್ಷ ಸ್ಥಾನದ ಪ್ರಬಲ ಅಭ್ಯರ್ಥಿಯೂ ಆಗಿದ್ದರು. ಆದರೆ ಉಮಾದೇವಿ ಅವರಿಗೆ ಅಧ್ಯಕ್ಷ ಸ್ಥಾನ ಕೈತಪ್ಪಿತ್ತು. ಇದೇ ಕಾರಣದಿಂದಲೇ ಕೋಟೆ ಕೃಷ್ಣ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ ಎನ್ನುವ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net