ಕೆಯುಡಬ್ಲ್ಯುಜೆ ಪತ್ರಿಕಾ ದಿನಾಚರಣೆ, ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ

ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚಿಕ್ಕಮಗಳೂರು ಘಟಕದ 2025-28ರ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ, ಪತ್ರಿಕಾ ದಿನಾಚರಣೆ ಹಾಗೂ ಕೆಯುಡಬ್ಲ್ಯುಜೆ ರಾಜ್ಯ ಮಟ್ಟದ ದತ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಸಿದ್ಧತೆಯನ್ನು ರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾದ್ಯಕ್ಷ ಎಚ್.ಬಿ. ಮದನಗೌಡ ವೀಕ್ಷಣೆ ಮಾಡಿದರು.
ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚಿಕ್ಕಮಗಳೂರು ಘಟಕದ 2025-28ರ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ, ಪತ್ರಿಕಾ ದಿನಾಚರಣೆ ಹಾಗೂ ಕೆಯುಡಬ್ಲ್ಯುಜೆ ರಾಜ್ಯ ಮಟ್ಟದ ದತ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಸಿದ್ಧತೆಯನ್ನು ರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾದ್ಯಕ್ಷ ಎಚ್.ಬಿ. ಮದನಗೌಡ ವೀಕ್ಷಣೆ ಮಾಡಿದರು.
Published on
ಚಿಕ್ಕಮಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚಿಕ್ಕಮಗಳೂರು ಘಟಕದ 2025-28ರ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ, ಪತ್ರಿಕಾ ದಿನಾಚರಣೆ ಹಾಗೂ ಕೆಯುಡಬ್ಲ್ಯುಜೆ ರಾಜ್ಯ ಮಟ್ಟದ ದತ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜು. 25ರಂದು ನಗರದ ಕುವೆಂಪು ಕಲಾಮಂದಿರದಲ್ಲಿ ನಡೆಯಲಿದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್ ಆನಂದ್ ತಿಳಿಸಿದ್ದಾರೆ.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಉದ್ಘಾಟಿಸಲಿದ್ದಾರೆ. ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ದತ್ತಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕನ್ನಡಪ್ರಭ –ಸುವರ್ಣ ನ್ಯೂಸ್ ಪ್ರಧಾನ ಸಂಪಾದಕ ರವಿ ಹೆಗಡೆ ಪ್ರಧಾನ ಭಾಷಣ ಮಾಡಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ತಗಡೂರು ದಿಕ್ಸೂಚಿ ಮಾತುಗಳನ್ನಾಡಲಿದ್ದಾರೆ ಎಂದು ವಿವರಿಸಿದ್ದಾರೆ.
ನಿಕಟಪೂರ್ವ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿನಂದನಾ ನುಡಿ ನುಡಿಯಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ದತ್ತಿ ಪ್ರಶಸ್ತಿಗೆ ಭಾಜನರಾದ ಪತ್ರಕರ್ತರ ಮೆರವಣಿಗೆಗೆ ಅಜಾದ್ ಪಾರ್ಕ್ ವೃತ್ತದಲ್ಲಿ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
ಹಿರಿಯ ಪತ್ರಕರ್ತರಿಗೆ ಶಾಸಕ ಎಚ್‌.ಡಿ.ತಮ್ಮಯ್ಯ ಸನ್ಮಾನಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದ ಪತ್ರಕರ್ತರಿಗೆ ಬಹುಮಾನ ವಿತರಣೆ ಮಾಡಲಿದ್ದಾರೆ. ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ, ಪ್ರತಿಭಾ ಪುರಸ್ಕಾರ ಮಾಡಲಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್, ಸದಸ್ಯತ್ವ ಕಾರ್ಡ್ ವಿತರಣೆ ಮಾಡಲಿದ್ದಾರೆ. ರಾಷ್ಟ್ರೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ ನೂತನ ಧ್ವಜ ಅನಾವರಣ ಮಾಡಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾದ್ಯಕ್ಷ ಎಚ್.ಬಿ. ಮದನಗೌಡ ಪ್ರಮಾಣ ವಚನ ಬೋದಿಸಿಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚಿಕ್ಕಮಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್ ಆನಂದ್ ಕಾರ್ಯಕ್ರಮದ ಅದ್ಯಕ್ಷತೆ ವಹಿಸಲಿದ್ದಾರೆ ಎಂದು ವಿವರಿಸಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕರಾದ ಟಿ.ಡಿ. ರಾಜೇಗೌಡ, ಕೆ.ಎಸ್. ಆನಂದ್, ಜಿ. ಎಚ್. ಶ್ರೀನಿವಾಸ್, ನಯನಾ ಮೋಟಮ್ಮ, ಭದ್ರ ಕಾಡ ಅಧ್ಯಕ್ಷ ಡಾ.ಕೆ.ಪಿ. ಅಂಶುಮಂತ್, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮದ ಅಧ್ಯಕ್ಷ ಬಿ.ಎಚ್. ಹರೀಶ್, ವಿಧಾನ ಪರಿಷತ್ ಸದಸ್ಯ ಧನಂಜಯ್ ಸರ್ಜಿ, ಆರತಿ ಕೃಷ್ಣ, ಪರಿಸರ ಮೌಲ್ಯ ಮಾಪನಾ ಸಮಿತಿ ಅದ್ಯಕ್ಷ ಎ.ಎನ್. ಮಹೇಶ್, ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಬೆಳ್ಳಿ ಪ್ರಕಾಶ್, ನಗರಸಭೆ ಅಧ್ಯಕ್ಷೆ ಭವ್ಯಾ ಮಂಜುನಾಥ್, ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ, ಎಸ್ ಪಿ ಜಿತೇಂದ್ರ ಕುಮಾರ್ ದಯಾಮ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಕಾರಿ ಎಚ್. ಎಸ್. ಕೀರ್ತನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net