ರೈತರ ಜತೆಗೆ ಬ್ಯಾಂಕ್‌ನ ಅಭಿವೃದ್ಧಿಯೂ ಮುಖ್ಯ

ಕೊಪ್ಪದಲ್ಲಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಮ್ಮಿಕೊಂಡಿದ್ದ ಚಿಂತನ ಮಂಥನ ಸಭೆಯನ್ನು ಅಧ್ಯಕ್ಷ ಸಿ.ಟಿ.ರವಿ ಉದ್ಘಾಟಿಸಿದರು.
ಕೊಪ್ಪದಲ್ಲಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಮ್ಮಿಕೊಂಡಿದ್ದ ಚಿಂತನ ಮಂಥನ ಸಭೆಯನ್ನು ಅಧ್ಯಕ್ಷ ಸಿ.ಟಿ.ರವಿ ಉದ್ಘಾಟಿಸಿದರು.
Published on
ಕೊಪ್ಪ: ರೈತರು ಮತ್ತು ಬ್ಯಾಂಕ್ ಒಟ್ಟಿಗೆ ಅಭಿವೃದ್ಧಿ ಸಾಧಿಸಿದರೆ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ಎಂಎಲ್ಸಿ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಸಿ.ಟಿ.ರವಿ ಹೇಳಿದರು.
ಪಟ್ಟಣದಲ್ಲಿ ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್, ತಾಲೂಕು ವ್ಯವಸಾಯೋತ್ಪನ್ನ ಮಾರುಕಟ್ಟೆ ಸಹಕಾರ ಸಂಘಗಳು, ಲ್ಯಾಂಪ್ಸ್ ಸಹಕಾರ ಸಂಘಗಳ ಸಹಕಾರದಲ್ಲಿ ಆಯೋಜಿಸಿದ್ದ ಜಿಲ್ಲಾ ಸಹಕಾರ ಕ್ಷೇತ್ರದ ಬೆಳವಣಿಗೆ ಕುರಿತು ಚಿಂತನ ಮಂಥನ ಸಭೆಯಲ್ಲಿ ಮಾತನಾಡಿ, ಸಹಕಾರ ವಲಯವನ್ನು ಗಟ್ಟಿಗೊಳಿಸುವ ಹಾಗೂ ಇಲ್ಲಿನ ಸಂಘಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ತಿಳಿದುಕೊಳ್ಳಲು ಈ ಕಾರ್ಯಕ್ರಮ ರೂಪಿಸಲಾಗಿದೆ. ಹಲವರು ಹಲವು ಅಭಿಪ್ರಾಯ ಹಾಗೂ ಸಮಸ್ಯೆಗಳನ್ನು ನಮ್ಮ ಮುಂದೆ ಇಟ್ಟಿದ್ದಾರೆ. ಅದನ್ನು ಮುಂದಿನ ದಿನದಲ್ಲಿ ಸರಿಪಡಿಸಿಕೊಳ್ಳುವ ಹಾಗೂ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ವಿಧಾನ ಪರಿಷತ್‌ನಲ್ಲಿಯೂ ಧ್ವನಿಯಾಗಲಾಗುವುದು ಎಂದು ಭರವಸೆ ನೀಡಿದರು.
ಯೂರಿಯಾ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದು ಗೊಬ್ಬರ ಅಭಾವಕ್ಕೆ ಒಂದು ಕಾರಣವಾಗಿದೆ. ಜತೆಯಲ್ಲಿ ಮಧ್ಯಪ್ರಾಚ್ಯದ ಯುದ್ಧದ ಕಾರಣಕ್ಕೆ ತಾತ್ಕಾಲಿಕವಾಗಿ ಕಾಣಿಸಿಕೊಂಡಿದೆ. ಗಿರಿಜನರ ಅರಣ್ಯ ಹಕ್ಕುಪತ್ರ ಸಮಸ್ಯೆ, ಪಕ್ಕ ಪೋಡಿಗೆ ಸಾಲ ನೀಡದ ಸಮಸ್ಯೆ, ಬೆಳೆಸಾಲ ಹಾಗೂ ಮಳೆ ಮಾಪನ ದುರಸ್ತಿಬಗ್ಗೆ ಗಮನ ಹರಿಸಲಾಗುತ್ತದೆ. ಬ್ಯಾಂಕ್ ಮೂಲಕ ರೂ.135 ಕೋಟಿ ರೂ. ಕೆಸಿಸಿ ಸಾಲ ನೀಡಲಾಗಿದೆ. ನಮ್ಮ ವ್ಯಾಪ್ತಿಯಲ್ಲಿ ಸಾಧ್ಯವಾದಷ್ಟೂ ಹೆಚ್ಚು ಸಾಲ ವಿತರಣೆ ಮಾಡಲಾಗುವುದು. ಹೆಚ್ಚು ಲಾಭ ಗಳಿಸಿದಾಗ ಹೆಚ್ಚು ಲಾಭಾಂಶ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.
ಬೆಟ್ಟಗೆರೆ ಕೃಷಿ ಪತ್ತಿನ ಸಹಕಾರ ಸಂಘದ ರಮೇಶ್ ಭಟ್, ಕೊಪ್ಪ ಲ್ಯಾಂಪ್ಸ್ ಸಹಕಾರ ಸಂಘದ ನಿರ್ದೇಶಕ ಮರಿಯಪ್ಪ, ಎಚ್.ಕೆ.ಸುರೇಶ್ ರೈತರ ಪರವಾಗಿ ಮಾತನಾಡಿದರು. ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಬಿ.ಎಸ್.ಸತೀಶ್, ದಿನೇಶ್ ಹೆಗ್ಡೆ, ಜಯಪಾಲ್, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಪ್ರವೀಣ್ ನಾಯ್ಕ, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ಪ್ರಶಾಂತ್, ಕೆ.ಟಿ.ವೆಂಕಟೇಶ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net