ಕಾಂಗ್ರೆಸ್‌ನಿಂದ ಮಡಿವಾಳ ಸಮಾಜದವರಿಗೆ ಪ್ರಾತಿನಿಧ್ಯವಿಲ್ಲ

ಕರ್ನಾಟಕ ರಾಜ್ಯ ಮಡಿವಾಳರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಎಂ.ಕೆ.ಹನುಮಂತಪ್ಪ
ಕರ್ನಾಟಕ ರಾಜ್ಯ ಮಡಿವಾಳರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಎಂ.ಕೆ.ಹನುಮಂತಪ್ಪ
Published on
ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ. ಈಗಲಾದರೂ ನಮ್ಮ ಸಮುದಾಯದ ಕಾಂಗ್ರೆಸ್ ಯುವ ಮುಂದಾಳುಗಳಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ಮಡಿವಾಳರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಎಂ.ಕೆ.ಹನುಮಂತಪ್ಪ ಆಗ್ರಹಿಸಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತರೀಕೆರೆ ವಿಧಾನಸಭಾ ಕ್ಷೇತ್ರದಿಂದ ೩ ಭಾರಿ ಸ್ಪರ್ಧಿಸಿ ಅತ್ಯಲ್ಪ ಮತದಿಂದ ಪರಾಭವಗೊಂಡು ಈಗಲೂ ಕಾಂಗ್ರೆಸ್ ಪಕ್ಷ ಸಂಘಟನೆಗಾಗಿ ದುಡಿಯುತ್ತಿರುವ ತರೀಕೆರೆಯ ಗೋಪಿಕೃಷ್ಣ ಅವರಿಗೆ ಎಂಎಲ್ ಸಿ ಸ್ಥಾನ ನೀಡಬೇಕು. ಇದರಿಂದ ಸಮುದಾಯಕ್ಕೆ ಒಳಿತಾಗುತ್ತದೆ. ಜತೆಗೆ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿರುವ ದುರುಗೇಶ ಮಡಿವಾಳ ಅವರಿಗೆ ಯಾವುದಾದರೂ ನಿಗಮ, ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನ ಕೊಡಬೇಕು ಎಂಬುದು ನಮ್ಮ ಆಗ್ರಹವಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮಡಿವಾಳ ಸಮಾಜದ ಮುಖಂಡರಾದ ಶಿವಮೂರ್ತಿ, ಮಂಜು, ಮಾಧುರಾಜು, ಬಸವರಾಜು, ಅಂಜು ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net