ಮರಡಿಹಳ್ಳಿ ಗ್ರಾಮದಲ್ಲಿ ವಿದ್ಯುತ್‌ತಂತಿ ತುಳಿದು ವ್ಯಕ್ತಿ ಸಾವು

ಮರಡಿಹಳ್ಳಿ ಗ್ರಾಮದಲ್ಲಿ ವಿದ್ಯುತ್ ಪ್ರವಹಿಸಿ ಮೃತಪಟ್ಟ ವ್ಯಕ್ತಿ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಮೆಸ್ಕಾಂ ವಿಭಾಗೀಯ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಮರಡಿಹಳ್ಳಿ ಗ್ರಾಮದಲ್ಲಿ ವಿದ್ಯುತ್ ಪ್ರವಹಿಸಿ ಮೃತಪಟ್ಟ ವ್ಯಕ್ತಿ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಮೆಸ್ಕಾಂ ವಿಭಾಗೀಯ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Published on
ಕಡೂರು: ವಿದ್ಯುತ್ ಪ್ರವಹಿಸುತ್ತಿದ್ದ ತಂತಿ ತುಳಿದು ಮರಡಿಹಳ್ಳಿ ಗ್ರಾಮದ ಹನುಮಂತಪ್ಪ (45) ಮೃತಪಟ್ಟಿದ್ದಾರೆ. ಹನುಮಂತಪ್ಪ ತಮ್ಮ ಜಮೀನಿಗೆ ತೆರಳಿ ಕೃಷಿ ಚಟುವಟಿಕೆ ನಡೆಸುತ್ತಿದ್ದಾಗ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹನುಮಂತಪ್ಪ ಅವರ ಮರಣಕ್ಕೆ ಮೆಸ್ಕಾಂ ಅಧಿಕಾರಿಗಳ ಕರ್ತವ್ಯ ಲೋಪ ಪ್ರಮುಖ ಕಾರಣ ಮರಡಿಹಳ್ಳಿಯ ಸುತ್ತಮುತ್ತಲಿನ ಗ್ರಾಮಗಳ ನೂರಾರು ಗ್ರಾಮಸ್ಥರು ಕಡೂರು ಪಟ್ಟಣದ ಮೆಸ್ಕಾಂ ವಿಭಾಗೀಯ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಗ್ರಾಮಾಂತರ ಕಿರಿಯ ಇಂಜಿನಿಯರ್ ಮತ್ತು ಮಾರ್ಗದಾಳು ಬದಲಾಯಿಸಬೇಕು. ಮೃತ ವ್ಯಕ್ತಿಯ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಪಟ್ಟುಹಿಡಿದರು. ಪ್ರತಿಭಟನೆ ವೇಳೆ ಕೆಲಕಾಲ ಬಿಗುವಿನ ವಾತಾವರಣ ಉಂಟಾಗಿತ್ತು. ಪ್ರತಿಭಟನಾ ನಿರಂತರು ಮತ್ತು ಮೆಸ್ಕಾಂ ಅಧೀಕ್ಷಕ ಇಂಜಿನಿಯರ್ ಮಧ್ಯೆ ಮಾತಿನ ಚಕಮಕಿ ನಡೆಯಿತು.
ನಾವು ನಮ್ಮ ಇತಿಮಿತಿಯಲ್ಲಿ ಪರಿಹಾರ ಕೊಡಿಸುವ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಮೆಸ್ಕಾಂ ಅಧಿಕಾರಿಗಳು ಎಷ್ಟೇ ಮನವೊಲಿಸಿದರೂ ಪಟ್ಟು ಬಿಡದ ಗ್ರಾಮಸ್ಥರು ಸೂಕ್ತ ಪರಿಹಾರಕ್ಕೆ ಒತ್ತಾಯಿಸಿ ಕಚೇರಿ ಮುಖ್ಯ ದ್ವಾರವನ್ನು ಮುಚ್ಚಿ ಸಂಜೆವರೆಗೂ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ನಿರತರನ್ನು ಮನವೊಲಿಸುವಲ್ಲಿ ಸಿಪಿಐ ರಫೀಕ್ ಮತ್ತು ಪಿಎಸ್‌ಐಗಳು ಹರಸಾಹಸಪಟ್ಟರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net