ಮಹಿಳೆಯರ ಅರ್ಥಿಕ ಅಭಿವೃದ್ಧಿಗೆ ಮತ್ಸ್ಯಸಂಜೀವಿನಿ ಸಹಕಾರಿ

ಎನ್.ಆರ್.ಪುರ ತಾಪಂನಲ್ಲಿ ಮತ್ಸ್ಯ ಸಂಜೀವಿನಿ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ಆಯೋಜಿಸಿದ್ದ ಎರಡು ದಿನಗಳ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಶಿಬಿರಾರ್ಥಿಗಳು.
ಎನ್.ಆರ್.ಪುರ ತಾಪಂನಲ್ಲಿ ಮತ್ಸ್ಯ ಸಂಜೀವಿನಿ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ಆಯೋಜಿಸಿದ್ದ ಎರಡು ದಿನಗಳ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಶಿಬಿರಾರ್ಥಿಗಳು.
Published on
ಎನ್.ಆರ್.ಪುರ: ಮತ್ಸ್ಯಸಂಜೀವಿನಿ ಯೋಜನೆಯಿಂದ ಮಹಿಳೆಯರು ಹೆಚ್ಚು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ತಾಪಂ ಇಒ ಎಚ್.ಡಿ.ನವೀನ್ ಕುಮಾರ್ ತಿಳಿಸಿದರು.
ತಾಪಂ ಸಾಮರ್ಥ್ಯಸೌಧದ ಸಭಾಂಗಣದಲ್ಲಿ ಮೀನುಗಾರಿಕೆ ಇಲಾಖೆ, ಜಿಪಂ, ತಾಪಂ, ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನೆ ಸಂಸ್ಥೆ, ಎನ್‌ಆರ್‌ಎಲ್‌ಎಂ ಸಂಜೀವಿನಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಶ್ರಯದಲ್ಲಿ ಮತ್ಸ್ಯಸಂಜೀವಿನಿ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ನಡೆದ ಎರಡು ದಿನಗಳ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಕೃಷಿ ಚಟುವಟಿಕೆ ನಡುವೆ ಉಪ ಕಸುಬಾಗಿ ಮೀನು ಸಾಕಾಣಿಕೆ ಮಾಡಿದರೆ ಆರ್ಥಿಕವಾಗಿ ಲಾಭಗಳಿಸಬಹುದು ಎಂದರು.
ಎನ್‌ಆರ್‌ಎಲ್‌ಎಂನ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಸುಬ್ರಹ್ಮಣ್ಯ ಮಾತನಾಡಿ, ಸರ್ಕಾರ ಮೀನುಗಾರಿಕೆ ಉತ್ತೇಜಿಸುವ ಉದ್ದೇಶದಿಂದ ಗ್ರಾಮೀಣ ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಕಲ್ಪಿಸಲು ತರಬೇತಿ ಕಾರ್ಯಾಗಾರ ಹಮ್ಮಿಕೊಂಡಿದೆ. ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಗ್ರಾಮದ ವ್ಯಾಪ್ತಿಯ ಕೆರೆಗಳಲ್ಲಿ ಮೀನು ಮರಿಗಳನ್ನು ಬಿಟ್ಟು ಅವುಗಳ ಪಾಲನೆ ಹಾಗೂ ಮಾರಾಟ ಮಾಡಿ ಲಾಭ ಪಡೆಯಬಹುದು ಎಂದರು.
ತಾಲೂಕು ಯೋಜನಾಧಿಕಾರಿ ಯಾದವ್‌ರಾಜ್, ಆರ್‌ಡಿಪಿಆರ್ ಸಹಾಯಕ ನಿರ್ದೇಶಕಿ ಮಂಜುಳಾ, ಮೆಣಸೂರು ಗ್ರಾಪಂ ಪಿಡಿಒ ಸಂತೋಷ, ಎನ್.ಆರ್.ಪುರ ತಾಲೂಕು ಸಂಜೀವಿನಿ ಒಕ್ಕೂಟದ ಕಾರ್ಯದರ್ಶಿ ಶಾಹಿದಾಭಾನು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net