ಕನ್ನಡವೇ ಸಾರ್ವಭೌಮವಾಗಿ ಮೆರೆಯಲಿ

ತರೀಕೆರೆ ರೋಟರಿ ಶಾಲೆಯಲ್ಲಿ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಕನ್ನಡ ಕಲರವ ರಸ ಮಂಜರಿ ಕಾರ್ಯಕ್ರಮವನ್ನು ಪುರಸಭೆ ಸದಸ್ಯ ಟಿ.ದಾದಾಪೀರ್ ಉದ್ಘಾಟಿಸಿದರು. ಬಿ.ಪಿ.ರವಿಕುಮಾರ್, ಪ್ರವೀಣ್ ನಾಹರ್, ಸುನೀತಾ, ಪಿ.ಪ್ರವೀಣ್, ಮೀರಾ ಇತರರಿದ್ದರು.
ತರೀಕೆರೆ ರೋಟರಿ ಶಾಲೆಯಲ್ಲಿ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಕನ್ನಡ ಕಲರವ ರಸ ಮಂಜರಿ ಕಾರ್ಯಕ್ರಮವನ್ನು ಪುರಸಭೆ ಸದಸ್ಯ ಟಿ.ದಾದಾಪೀರ್ ಉದ್ಘಾಟಿಸಿದರು. ಬಿ.ಪಿ.ರವಿಕುಮಾರ್, ಪ್ರವೀಣ್ ನಾಹರ್, ಸುನೀತಾ, ಪಿ.ಪ್ರವೀಣ್, ಮೀರಾ ಇತರರಿದ್ದರು.
Published on
ತರೀಕೆರೆ: ಕರ್ನಾಟಕದಲ್ಲಿ ಕನ್ನಡ ಭಾಷೆಯೇ ಸಾರ್ವಭೌಮವಾಗಿ ಮೆರೆಯಬೇಕು ಎಂದು ಪುರಸಭೆ ಸದಸ್ಯ ಟಿ.ದಾದಾಪೀರ್ ಹೇಳಿದರು.
ಪಟ್ಟಣದ ರೋಟರಿ ಶಾಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಇನ್ನರ್‌ವ್ಹೀಲ್ ಹಾಗೂ ರೋಟರಿ ಕ್ಲಬ್ ಸಹಯೋಗದಲ್ಲಿ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಕನ್ನಡ ಕಲರವ ರಸ ಮಂಜರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನವೆಂಬರ್‌ನಲ್ಲಿ ಮಾತ್ರ ರಾಜ್ಯೋತ್ಸವ ಆಚರಿಸಿದರೆ ಸಾಲದು. ಭಾಷೆ ಬಳಕೆ ಕಡ್ಡಾಯಗೊಳಿಸಿ ಆಚರಣೆ ನಿರಂತರಗೊಳಿಸಬೇಕು. ಈ ಮಹತ್ತರ ಕಾರ್ಯದಲ್ಲಿ ಯುವಪೀಳಿಗೆ ತೊಡಗಿಸಿಕೊಳ್ಳುವ ಮೂಲಕ ನಾಡಿನ ಇತಿಹಾಸ, ಕಲೆ, ಸಂಸ್ಕೃತಿ, ಭಾಷೆಯ ಅರಿವು ಮೂಡಿಸಿ ಸಮಾಜದಲ್ಲಿ ಅಮೂಲಾಗ್ರ ಬದಲಾವಣೆಗೆ ಕಾರಣವಾಗಬೇಕು ಎಂದರು.
ರೋಟರಿ ಅಧ್ಯಕ್ಷ ಬಿ.ಪಿ.ರವಿಕುಮಾರ್ ಮಾತನಾಡಿ, ನಾಡಿನಲ್ಲಿ ಕನ್ನಡ ಭಾಷೆಗೆ ಕುತ್ತು ಬಂದಿದೆ. ಅನ್ಯ ಭಾಷಿಕರಿಂದ ಕನ್ನಡದ ಮೇಲೆ ದಬ್ಬಾಳಿಕೆ ಹೆಚ್ಚಾಗುತ್ತಿರುವುದು ಮಾತ್ರವಲ್ಲ, ನಮ್ಮ ನೆಲದಲ್ಲಿ ನಮ್ಮವರಿಗೆ ಉದ್ಯೋಗ ಲಭಿಸುವುದು ಕಷ್ಟವಾಗಿದೆ. ಇಂಥ ಸಂಕೀರ್ಣತೆಯಲ್ಲಿ ಕನ್ನಡ ಆಸ್ಮಿತೆಗಾಗಿ ಎಲ್ಲರೂ ಒಗ್ಗೂಡಿ ಹೋರಾಡುವ ಅನಿವಾರ್ಯತೆ ಎದುರಾಗಿದೆ ಎಂದು ಹೇಳಿದರು.
ರಸ ಮಂಜರಿ ಕಾರ್ಯಕ್ರಮದಲ್ಲಿ ಗಾಯಕರು ನಾಡಿನ ಮಹತ್ವ ಸಾರುವ ಕನ್ನಡ ಗೀತೆಗಳನ್ನು ಹಾಡಿ ನೆರೆದಿದ್ದವರನ್ನು ರಂಜಿಸಿದರು.   
ರೋಟರಿ ವಲಯ-7ರ ಸಹಾಯಕ ಗರ್ವನರ್ ಪ್ರವೀಣ್ ನಾಹರ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಹಿಳಾ ಘಟಕದ ಅಧ್ಯಕ್ಷೆ ಸುನೀತಾ, ಇನ್ನರ್‌ವ್ಹೀಲ್ ಕ್ಲಬ್ ಅಧ್ಯಕ್ಷೆ ಮೀರಾ, ರೋಟರಿ ಸಂಸ್ಥೆ ಕಾರ್ಯದರ್ಶಿ ಪಿ.ಪ್ರವೀಣ್, ಸದಸ್ಯ ಡಾ. ಬಿ.ವಿ.ಕಿಶೋರ್‌ಕುಮಾರ್ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net