ಎಂ.ಕೆ.ಪ್ರಾಣೇಶ್‌ಗೆ ಸ್ಥಾನ ಕಳೆದುಕೊಳ್ಳುವ ಆತಂಕ

ಎಂ.ಎಸ್.ಅನಂತ್.
ಎಂ.ಎಸ್.ಅನಂತ್.
Published on

ಪ್ರಮುಖ ಮುಖ್ಯಾಂಶಗಳು

  • ವಿಧಾನ ಪರಿಷತ್ ಚುನಾವಣೆ
  • ಬಿಜೆಪಿಯಲ್ಲಿನ ಹುಳುಕನ್ನು
ಮೂಡಿಗೆರೆ: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿರುವುದರಿಂದ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಸ್ಥಾನ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಇದರಿಂದಾಗಿ ಹತಾಶೆಯ ಹೇಳಿಕೆ ನೀಡಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಸಂಯೋಜಕ ಎಂ.ಎಸ್.ಅನಂತ್ ಹೇಳಿದರು. 
ವಿಧಾನ ಪರಿಷತ್ ಚುನಾವಣೆಯಲ್ಲಿ ಗೆದ್ದಿರುವುದಕ್ಕೆ ಕಾಂಗ್ರೆಸ್ ಹೆಮ್ಮೆಪಡುವ ಅಗತ್ಯವಿಲ್ಲ ಎಂದು ಎಂ.ಕೆ.ಪ್ರಾಣೇಶ್ ಹೇಳಿದ್ದಾರೆ. ಅವರು ಬಿಜೆಪಿಯಲ್ಲಿನ ಹುಳುಕನ್ನು ಮತ್ತು ಒಡಕನ್ನು ಮೊದಲು ಸರಿಪಡಿಸಿಕೊಳ್ಳಲಿ. ಅಧಿಕಾರ ಇಲ್ಲದೆ ಹತಾಶರಾಗಿರುವ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ ನಾಯಕರ ಅಪಪ್ರಚಾರಕ್ಕೆ ಜನ ಕಿವಿಗೊಡುವುದಿಲ್ಲ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ತಮ ಆಡಳಿತ ನೀಡುವ ಭರವಸೆ ಮೂಡಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸೋಲುವ ಮುನ್ಸೂಚನೆ ದೊರೆತಿದೆ. ಇದರಿಂದ ಬಿಜೆಪಿ ನಾಯಕರು ವಿಚಲಿತಗೊಂಡಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ವ್ಯಂಗ್ಯವಾಡಿದರು. 
ಅಡ್ಡಮತದಾನ ಕುರಿತು ಪರಾಮರ್ಶೆ ನಡೆಸಲು ಬಿಜೆಪಿ ನಾಯಕರು ಸಿ.ಟಿ.ರವಿ ನೇತೃತ್ವದ ಸತ್ಯಶೋಧನಾ ಸಮಿತಿ ರಚಿಸಿದ್ದಾರೆ. ಇದು ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಬಿರುಕು ಮೂಡಿದೆ. ಬಿಜೆಪಿ ನಾಯಕರು ಇನ್ನಿಲ್ಲದ ಪ್ರಯತ್ನ ನಡೆಸಿ ಜೆಡಿಎಸ್ ಪರಿಷತ್ ಅಭ್ಯರ್ಥಿಯನ್ನು ಸೋಲಿಸಿದ್ದಾರೆ. ಕೇಂದ್ರ ಸಚಿವ ಸ್ಥಾನವನ್ನು ಉಳಿಸಿಕೊಳ್ಳುವ ಸಲುವಾಗಿ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ವಿರುದ್ಧ ಮಾತನಾಡುತ್ತಿಲ್ಲ. ಕಾಂಗ್ರೆಸ್ ವಿರುದ್ಧ ಇನ್ನಾದರೂ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಟೀಕೆ ಮಾಡುವುದನ್ನು ಬಿಡಲಿ ಎಂದು ಹೇಳಿದರು. 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net