ಅಂಬೇಡ್ಕರ್ ವಸತಿ ಶಾಲೆಗೆ ಶಾಸಕ ಎಚ್.ಡಿ.ತಮ್ಮಯ್ಯ ಭೇಟಿ

ಚಿಕ್ಕಮಗಳೂರು ಬೈಪಾಸ್ ರಸ್ತೆಯಲ್ಲಿರುವ ಅಂಬೇಡ್ಕರ್ ವಸತಿ ಶಾಲೆ (ಆವುತಿ) ಗೆ ಶಾಸಕ ಎಚ್.ಡಿ. ತಮ್ಮಯ್ಯ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಿಕ್ಕಮಗಳೂರು ಬೈಪಾಸ್ ರಸ್ತೆಯಲ್ಲಿರುವ ಅಂಬೇಡ್ಕರ್ ವಸತಿ ಶಾಲೆ (ಆವುತಿ) ಗೆ ಶಾಸಕ ಎಚ್.ಡಿ. ತಮ್ಮಯ್ಯ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Published on
ಚಿಕ್ಕಮಗಳೂರು: ನಗರದ ಬೈಪಾಸ್ ರಸ್ತೆಯಲ್ಲಿರುವ ಅಂಬೇಡ್ಕರ್ ವಸತಿ ಶಾಲೆ (ಆವುತಿ) ಗೆ ಶಾಸಕ ಎಚ್.ಡಿ. ತಮ್ಮಯ್ಯ ಗುರುವಾರ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಈ ವಸತಿ ಶಾಲೆಯ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿರುವುದರಿಂದ ಇಲ್ಲಿಗೆ ಶಿಫ್ಟ್ ಮಾಡಲಾಗಿದೆ. ಊಟ ಸರಿ ಇಲ್ಲ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ. ಸುಮಾರು ಮೂರುವರೆ ವರ್ಷದ ಹಿಂದೆ ಇಲ್ಲಿಗೆ ಶಿಫ್ಟ್ ಮಾಡಿದ್ದಾರೆ. ಅಂದಿನ ಅಧಿಕಾರಿಗಳು, ಜನಪ್ರತಿನಿಧಿಗಳು ಈ ಕಟ್ಟಡ ಹೇಗಿದೆ ಎಂದು ನೋಡದೆ ಶಿಫ್ಟ್ ಮಾಡಿದ್ದಾರೆ ಎಂದರು.
ಇದು, ಮೂಡಿಗೆರೆ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಶಾಸಕಿ ನಯನಾ ಮೋಟಮ್ಮ ಅವರ ಪ್ರಯತ್ನದಿಂದ ಕಣತಿ ಬಳಿ ಹೊಸ ಕಟ್ಟಡ ನಿರ್ಮಾಣ ಆಗುತ್ತಿದೆ. ಮೇಲ್ನೋಟಕ್ಕೆ ಕಾಣುವಂತೆ ಅಡುಗೆ ಮನೆ ಮತ್ತು ಶೌಚಾಲಯ ಸರಿ ಇಲ್ಲ. ಇನ್ನು ಎರಡು ತಿಂಗಳು ಇರುವುದರಿಂದ ಕಟ್ಟಡ ಮಾಲೀಕರು ಕೂಡ ಗಮನಹರಿಸಿಲ್ಲ, ವಾರ್ಡನ್ ಅವರನ್ನು ಬದಲಾವಣೆ ಮಾಡಲಾಗಿದೆ. ಕ್ರೈಸ್ ಸಂಸ್ಥೆಗೆ ಬರೆಯಲಾಗಿದೆ. ಮಕ್ಕಳಿಗೆ ಶಿಕ್ಷಣ ಜೊತೆ ಸರಿಯಾದ ಆರೋಗ್ಯ ಇರಬೇಕಾದರೆ ಅಡುಗೆಮನೆ ಮತ್ತು ಶೌಚಾಲಯ ಚೆನ್ನಾಗಿರಬೇಕು. ಅದು ಗಮನಕ್ಕೆ ಬರುತ್ತಿದ್ದಂತೆ ಭೇಟಿ ಮಾಡಿದ್ದೇನೆ ಎಂದು ಹೇಳಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net