ಚಿಕ್ಕಮಗಳೂರು ಮಲ್ಲಂದೂರು ರಸ್ತೆ ಸಮೀಪದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಸಂಚಾರ ಪೊಲೀಸ್ ಠಾಣೆ, ಕಾಲೇಜು ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ಧ ಸಂಚಾರ ನಿಯಮ ಹಾಗೂ ರಸ್ತೆ ಸುರಕ್ಷತಾ ಕ್ರಮಗಳ ಮಾಹಿತಿ ಕಾರ್ಯಕ್ರಮದಲ್ಲಿ ಸಂಚಾರ ಠಾಣೆ ಪೊಲೀಸರು ವಿದ್ಯಾರ್ಥಿಗಳಿಗೆ ಸಂಚಾರಿ ನಿಯಮಗಳ ಬಗ್ಗೆ ಮಾಹಿತಿ ನೀಡಿದರು. ಆದರ್ಶ್, ಮೂಡಲಗಿರಿಯಯ್ಯ, ಶಿವಕುಮಾರ್ ಮತ್ತಿತರರಿದ್ದರು.
ಚಿಕ್ಕಮಗಳೂರು: ವಾಹನ ಸವಾರರು ರಸ್ತೆ ಸುರಕ್ಷತೆ ಮತ್ತು ಸಾರ್ವಜನಿಕರ ಅಮೂಲ್ಯ ಜೀವಗಳ ರಕ್ಷಣೆಗಾಗಿ ಸಂಚಾರಿ ನಿಯಮಗಳನ್ನು ಪಾಲಿಸಬೇಕು. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಶಿಕ್ಷೆಗೂ ಗುರಿಯಾಗಬಹುದು ಎಂದು ಸಂಚಾರಿ ಪೊಲೀಸ್ ಉಪನಿರೀಕ್ಷಕ ಆದರ್ಶಕುಮಾರ್ ಹೇಳಿದರು.
ನಗರದ ಮಲ್ಲಂದೂರು ರಸ್ತೆ ಸಮೀಪದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಸಂಚಾರ ಪೊಲೀಸ್ ಠಾಣೆ, ಕಾಲೇಜು ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ಧ ಸಂಚಾರ ನಿಯಮ ಹಾಗೂ ರಸ್ತೆ ಸುರಕ್ಷತಾ ಕ್ರಮಗಳ ಮಾಹಿತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ದ್ವಿಚಕ್ರ ವಾಹನಗಳಲ್ಲಿ ಯುವಕರು ಹೆಚ್ಚು ಜಾಗೃತೆ ವಹಿಸಬೇಕು. ಹೆಲ್ಮೆಟ್ ಧರಿಸಬೇಕು, ತ್ರಿಬಲ್ ರೈಡಿಂ ಗ್ ಮಾಡಬಾರದು. ವಿಪರೀತ ವೇಗದಲ್ಲಿ ಸಂಚರಿಸಬಾರದು. ನಾಲ್ಕು ಚಕ್ರ ವಾಹನಗಳಲ್ಲಿ ಕಡ್ಡಾಯವಾಗಿ ಸೀಟ್‌ಬೆಲ್ಟ್ ಧರಿಸಬೇಕು. ಮದ್ಯಪಾನ ಮಾಡಿ ವಾಹನ ಚಲಾಯಿಸಬಾರದು ಎಂದು ಕಿವಿಮಾತು ಹೇಳಿದರು
ಸಾರ್ವಜನಿಕರು ರಸ್ತೆ ದಾಟುವಾಗ ವಾಹನ ಸವಾರರು ನಿಧಾನಗತಿಯಲ್ಲಿ ಸಾಗಬೇಕು. ಪಾದಚಾರಿಗಳು ಕೂಡಾ ನಿಯಮವನ್ನು ಕಡ್ಡಾಯವಾಗಿ ಪಾಲಿಸಿದರೆ ಅಪಘಾತವನ್ನು ತಡೆಗಟ್ಟಲು ಸಾಧ್ಯವಾಗಲಿದೆ. ಸಂಚಾರಿ ಕಾನೂನುಗಳ ಉಲ್ಲಂಘನೆ ಶಿಕ್ಷಾರ್ಹ ಅಪರಾಧ. ವಾಹನಗಳಲ್ಲಿ ಸಂಚಾರ ಮಾಡುವಾಗ ಅನಾಹುತ ಸಂಭವಿಸದAತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು.
ಇAದಿನ ಯುವಪೀಳಿಗೆ ದ್ವಿಚಕ್ರಗಳಲ್ಲಿ ವೀಲಿಂಗ್, ಆತುರದಿಂದ ಸಂಚಾರಿ ನಿಯಮ ಪಾಲಿಸದೇ ಸಾಗುವುದು ಅಕ್ಷö್ಯಮ ಅಪರಾಧ. ಪ್ರತಿಯೊಬ್ಬರೂ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿ, ಅಪಘಾತಗಳು ನಡೆಯದಂತೆ ಸಂಚಾರ ನಡೆಸಿ ಅಮೂಲ್ಯ ಜೀವಗಳನ್ನು ಉಳಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜು ಪ್ರಾಚಾರ್ಯ ಡಾ.ಮೂಡಲಗಿರಿಯ್ಯ, ವಿಶೇಷವಾಗಿ ನಗರದಲ್ಲಿ ವಾಹನಗಳ ದಟ್ಟಣೆ ಹೆಚ್ಚಿರುತ್ತದೆ. ವಿದ್ಯಾರ್ಥಿಗಳು ಎರಡು ದಿಕ್ಕಿನಿಂದ ಗಮನವಿಟ್ಟು ನೋಡಿ ರಸ್ತೆ ದಾಟಬೇಕು. ಅಲ್ಲದೇ ಸಂಚಾರಿ ನಿಯಮಗಳನ್ನು ಸರಿಯಾಗಿ ಪಾಲಿಸುವ ಮೂಲಕ ಆರಕ್ಷಕರಿಗೆ ನೆರವಾಗಬೇಕು ಎಂದು ಹೇಳಿದರು.
ವಾಹನ ಚಲಾಯಿಸಲು ಕನಿಷ್ಟ ವಯಸ್ಸು ೧೮ ತುಂಬಿರಬೇಕು. ಕಡ್ಡಾಯವಾಗಿ ಚಾಲನಾ ಪರವಾನಗಿ ಮಾಡಿಸಿರಬೇಕು. ಕಡಿಮೆ ವಯಸ್ಸಿನಲ್ಲಿ ವಾಹನ ಸಂಚರಿಸಿ ಅಪಘಾತಕ್ಕೆ ಒಳಗಾದರೆ ಇಡೀ ಕುಟುಂಬವೇ ದುಃಖದ ಕಡಲಲ್ಲಿ ಮುಳುಗಲಿದ್ದು, ಹೀಗಾಗಿ ಸವಾರರು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದAತೆ ಸಂಚರಿಸಬೇಕು ಎಂದರು.
ಈ ಸಂರ್ಭದಲ್ಲಿ ಸಹಾಯಕ ಪೊಲೀಸ್ ಉಪನಿರೀಕ್ಷಕ ಶಿವಕುಮಾರ್, ಮಹಿಳಾ ಪೇದೆ ಲತಾ, ಸಹಾಯಕ ಪ್ರಾಧ್ಯಾಪಕ ಎ.ಆರ್.ಶಿವರಾಜು, ಕಾಲೇಜು ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.