ಗೋಣಿಬೀಡು, ಬಣಕಲ್ ಹೋಬಳಿ ಅಧ್ಯಕ್ಷರನ್ನು ಸದ್ಯದಲ್ಲೇ ಬದಲಾವಣೆ ಮಾಡಲಾಗುವುದು. ಕಾಂಗ್ರೆಸ್‌ನಲ್ಲಿ ಹೋಬಳಿ ಅಧ್ಯಕ್ಷರ ಹುದ್ದೆ ಇಲ್ಲ. ಸಂಘಟನೆ ದೃಷ್ಟಿಯಿಂದ ಮೂಡಿಗೆರೆ ಮತ್ತು ಶೃಂಗೇರಿಯಲ್ಲಿ ಹೋಬಳಿ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಲಾಗಿತ್ತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಅಧಿಕಾರವಿರುವುದು ರಾಜ್ಯಾಧ್ಯಕ್ಷರಿಗೆ ಮಾತ್ರ. ನನ್ನನ್ನು ಜವಾಬ್ದಾರಿಯಿಂದ ಬಿಡುಗಡೆಗೊಳಿಸುವಂತೆ ಜಿಲ್ಲಾಧ್ಯಕ್ಷರಲ್ಲಿ ಮನವಿ ಮಾಡಿದರೂ ಅವರು ಒಪ್ಪದೆ ಮುಂದುವರಿಸಿದ್ದಾರೆ. ನಾನು ಪಕ್ಷಕ್ಕೆ ಮುಜುಗರ ತರುವ ರೀತಿಯಲ್ಲಿ ವರ್ತಿಸಿಲ್ಲ. ಈಗ ಕೆಲವರು ನನ್ನ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.