ರಸ್ತೆ ಬದಿ ಹಣ್ಣು ಮಾರಾಟ ಮಾಡುವುದನ್ನು ನಿಷೇಧಿಸಿರುವ ಪಪಂ ಮತ್ತು ಪೊಲೀಸರ ವಿರುದ್ಧ ಜೆಡಿಎಸ್‌ನಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು. ಸಮಸ್ಯೆ ಬಗೆಹರಿಸದಿದ್ದರೆ ಸಂಬಂಧಪಟ್ಟ ಇಲಾಖೆ ಎದುರು ಪ್ರತಿಭಟನೆ ನಡೆಸಲಾಗುವುದು. ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಿಗದಿತ ಸಮಯದೊಳಗೆ ನಡೆಸಬೇಕು. ಸ್ಥಳೀಯ ಸಂಸ್ಥೆಗಳ ಅಧಿಕಾರಾವಧಿ ಮುಗಿಯುವ ಮುನ್ನವೇ ಮೀಸಲಾತಿ ಪ್ರಕಟಿಸಿದರೆ ಅನ್ಯಾಯವಾಗಿದ್ದರೆ ನ್ಯಾಯಾಲಯದಲ್ಲಿ ಪ್ರಶ್ನಿಸಲು ಅವಕಾಶವಿರುತ್ತದೆ. ಸಮಸ್ಯೆ ಬೇಗ ಬಗೆಹರಿಸಿ ನಿಗದಿತ ಸಮಯದೊಳಗೆ ಚುನಾವಣೆ ನಡೆಸಲು ಅವಕಾಶವಾಗುತ್ತದೆ. ನಿಗದಿತ ಅವಧಿಯಲ್ಲಿ ಚುನಾವಣೆ ನಡೆಸಿದರೆ ಸ್ಥಳೀಯ ಸಮಸ್ಯೆಗಳನ್ನು ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಬಗೆಹರಿಸಲು ಸಹಾಯಕವಾಗುತ್ತದೆ ಎಂದರು. ಜೆಡಿಎಸ್ ಮುಖಂಡ ಸತ್ಯನಾರಾಯಣ ಶ್ರೇಷ್ಠಿ, ವಕ್ತಾರ ಸತೀಶ್, ನವೀನ್ ಇದ್ದರು.