ತಾಲೂಕು ಸಿಎಸ್‌ಸಿ ನೋಡಲ್ ಅಧಿಕಾರಿ ಪಂಕಜಾ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಗಣಿತ, ವೈಜ್ಞಾನಿಕ ಹಾಗೂ ತಾರ್ಕಿಕ ಕೌಶಲ ವೃದ್ಧಿಸುವ ಉದ್ದೇಶದಿಂದ ಒಲಿಂಪಿಯಾಡ್ ಪರೀಕ್ಷೆ ಆಯೋಜಿಸಲಾಗುತ್ತಿದೆ. ಮೂರನೇ ತರಗತಿಯಿಂದ ಹನ್ನೆರಡನೇ ತರಗತಿವರೆಗಿನ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅವಕಾಶವಿದ್ದು ವಿದ್ಯಾರ್ಥಿಗಳು ಗಣಿತ, ವಿಜ್ಞಾನ, ಇಂಗ್ಲಿಷ್, ಕಂಪ್ಯೂಟರ್ ಹಾಗೂ ಸಾಮಾನ್ಯ ಜ್ಞಾನಕ್ಕೆ ಸಂಬಂಧಿಸಿದ ವಿಷಯಗಳ ಪರೀಕ್ಷೆ ಬರೆದು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿಭೆ ಸಾಬೀತುಪಡಿಸಬೇಕು ಎಂದರು. ಕೃಷಿ ಮೇಲ್ವಿಚಾರಕ ಸಂತೋಷ್, ಸೇವಾಪ್ರತಿನಿಧಿಗಳಾದ ನಾಗರತ್ನಾ, ಹರೀಶ್ ಮತ್ತಿತರರಿದ್ದರು.