ಕಳಸ: ಸಂಸೆ ಗ್ರಾಮ ಪಂಚಾಯಿತಿ ಕಸವನ್ನು ಜಾಂಬಳೆ ಗ್ರಾಮದಲ್ಲಿ ವಿಲೇವಾರಿ ಮಾಡುತ್ತಿರುವುದಕ್ಕೆ ಸ್ಥಳೀಯ ನಿವಾಸಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸಂಸೆ ಗ್ರಾಮದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಜಾಂಬಳೆ ಗ್ರಾಮಕ್ಕೆ ನಿರಂತರವಾಗಿ ಕಸ ತಂದು ಸುರಿಯುತ್ತಿರುವುದರಿಂದ ಗ್ರಾಮದಲ್ಲಿ ಅನೈರ್ಮಲ್ಯ ವಾತಾವರಣ ಉಂಟಾಗಿದೆ ಎಂದು ನಿವಾಸಿಗಳು ದೂರಿದ್ದಾರೆ.