೨೦೦ಕ್ಕೂ ಅಧಿಕ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ

ಚಿಕ್ಕಮಗಳೂರಿನ ನೂರಾರು ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಕಳೆದ ಬಾರಿಯ ಮೂಡಿಗೆರೆ ಕ್ಷೇತ್ರದ ಬಿಜೆಪಿ ಟಿಕೆಟ್‌ ಆಕಾಂಕ್ಷಿ ವಿಜಯ್‌ ಕುಮಾರ್‌ ನೇತೃತ್ವದಲ್ಲಿ ಜೆಡಿಎಸ್‌ ಸೇರ್ಪಡೆಗೊಂಡರು. ನಿಖಿಲ್‌ ಕುಮಾರ್ ಸ್ವಾಮಿ, ಎಸ್‌.ಎಲ್‌.ಭೋಜೇಗೌಡ ಮತ್ತಿತರರಿದ್ದರು.
ಚಿಕ್ಕಮಗಳೂರಿನ ನೂರಾರು ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಕಳೆದ ಬಾರಿಯ ಮೂಡಿಗೆರೆ ಕ್ಷೇತ್ರದ ಬಿಜೆಪಿ ಟಿಕೆಟ್‌ ಆಕಾಂಕ್ಷಿ ವಿಜಯ್‌ ಕುಮಾರ್‌ ನೇತೃತ್ವದಲ್ಲಿ ಜೆಡಿಎಸ್‌ ಸೇರ್ಪಡೆಗೊಂಡರು. ನಿಖಿಲ್‌ ಕುಮಾರ್ ಸ್ವಾಮಿ, ಎಸ್‌.ಎಲ್‌.ಭೋಜೇಗೌಡ ಮತ್ತಿತರರಿದ್ದರು.
Published on
ಚಿಕ್ಕಮಗಳೂರು: ಚಿಕ್ಕಮಗಳೂರು ಮತ್ತು ಮೂಡಿಗೆರೆ ತಾಲೂಕಿನ ನೂರಾರು ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪ್ರಮುಖ ಮುಂಖಂಡರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.
ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಪ್ರಮುಖ ಮುಖಂಡರು ಮತ್ತು ನೂರಾರು ಕಾರ್ಯಕರ್ತರು ೨೦೨೩ರ ವಿಧಾನಸಭಾ ಚುನಾವಣೆಯ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಮುಖ ಮುಖಂಡ ವಿಜಯ್ ಕುಮಾರ್ ಅವರ ನೇತೃತ್ವದಲ್ಲಿ ಈ ಪಕ್ಷಾಂತರ ಪ್ರಕ್ರಿಯೆ ನಡೆದಿದೆ.
ಇವರೊಂದಿಗೆ ಹಿಂದುತ್ವವಾದಿ ಹಾಗೂ ಭಜರಂಗದಳದ ಮಾಜಿ ಜಿಲ್ಲಾ ಸಂಚಾಲಕ ತುಡುಕೂರು ಮಂಜು, ಯೂತ್ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಮಂಜು ಸೇರಿದಂತೆ ಬಿಜೆಪಿ ಯುವ ಮೋರ್ಚಾ ಮಂಡಲದ ಪ್ರಮುಖ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್-ಬಿಜೆಪಿಯ ೨೦೦ಕ್ಕೂ ಹೆಚ್ಚು ಸಕ್ರಿಯ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಯಾಗಿದ್ದಾರೆ.
ಬುಧವಾರ ಬೆಂಗಳೂರಿನ ಜೆಡಿಎಸ್ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರ ಸಮ್ಮುಖದಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಅಧಿಕೃತವಾಗಿ ಪಕ್ಷದ ಶಾಲು ಧರಿಸಿ ಸೇರ್ಪಡೆಗೊಂಡರು.
ಈ ಬೃಹತ್ ಸೇರ್ಪಡೆ ಕಾರ್ಯಕ್ರಮಕ್ಕಾಗಿ ಚಿಕ್ಕಮಗಳೂರಿನಿಂದ ನೂರಾರು ಕಾರ್ಯಕರ್ತರು ರಾಜಧಾನಿ ಬೆಂಗಳೂರಿಗೆ ತೆರಳಿದ್ದರು. ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರ ಈ ದಿಢೀರ್ ವಲಸೆಯು ಮಲೆನಾಡು ಭಾಗದ ಕಾಂಗ್ರೆಸ್ ಮತ್ತು ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿಸಿದ್ದು, ಜೆಡಿಎಸ್ ಪಕ್ಷದ ಸಂಘಟನಾ ಬಲವನ್ನು ಮತ್ತಷ್ಟು ಹೆಚ್ಚಿಸಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net