ಲಿಂಗದಹಳ್ಳಿಯ ಜಿಆರ್‌ವಿಸಿಸಿ ವತಿಯಿಂದ ಕಲ್ಲತ್ತಿಗಿರಿ ಶ್ರೀ ವಿರಭದ್ರೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ರಾಜ್ಯಮಟ್ಟ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ, ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಮಳೆಗಾಲದಲ್ಲಿ ರೈತರು ತಮ್ಮ ಕೃಷಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ದೈಹಿಕ ಸ್ಥರತೆ ಕಾಪಾಡಿಕೊಂಡರೆ ಬೇಸಿಗೆಯ ಸಂದರ್ಭಗಳಲ್ಲಿ ವಿವಿಧ ಕ್ರೀಡಾ ಕೂಟಗಳಲ್ಲಿ ಭಾಗವಹಿಸುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.