ಧರ್ಮೆಂದ್ರ ಪ್ರದಾನ್ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ

ಚಿಕ್ಕಮಗಳೂರಿನ ಆಜಾದ್‌ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ  ಸಮಾನ ಮನಸ್ಕರು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳನ್ನು ತಡೆಯುವಲ್ಲಿ ಕೇಂದ್ರ ಸರ್ಕಾರ ಮತ್ತು ಕೇಂದ್ರ ಶಿಕ್ಷಣ ಸಚಿವರು ವಿಫಲರಾಗಿದ್ದಾರೆ ಎಂದು ಆರೋಪಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಎಂ.ಎಲ್‌.ಮೂರ್ತಿ ಮಾತನಾಡಿದರು.

Published on
ಚಿಕ್ಕಮಗಳೂರು: ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳನ್ನು ತಡೆಯುವಲ್ಲಿ ಕೇಂದ್ರ ಸರ್ಕಾರ ಮತ್ತು ಕೇಂದ್ರ ಶಿಕ್ಷಣ ಸಚಿವರು ವಿಫಲರಾಗಿದ್ದಾರೆ ಎಂದು ಆರೋಪಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ನಗರದ ಆಜಾದ್‌ ಪಾರ್ಕ್ ವೃತ್ತದಲ್ಲಿ ಸಮಾನ ಮನಸ್ಕರು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಜಂಟಿ ಆಶ್ರಯದಲ್ಲಿ ಪ್ರತಿಭಟನೆ ನಡೆಸಲಾಯಿತು.
ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳಿಂದ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದ್ದು, ಪರೀಕ್ಷಾ ವ್ಯವಸ್ಥೆಯ ಮೇಲಿನ ನಂಬಿಕೆ ಕುಸಿಯುವಂತಾಗಿದೆ. ಇಂತಹ ಅಕ್ರಮಗಳನ್ನು ತಡೆಯುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಇದೇ ವೇಳೆ, ವಿದ್ಯಾರ್ಥಿಗಳ ಪರವಾಗಿ ಧ್ವನಿಯೆತ್ತಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಹಿರಿಯ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ಬಂಧಿಸಿರುವುದನ್ನು ಖಂಡಿಸಿದ ಪ್ರತಿಭಟನಾಕಾರರು, ಇದು ಪ್ರಜಾಪ್ರಭುತ್ವ ಮೌಲ್ಯಗಳಿಗೆ ವಿರುದ್ಧವಾದ ಕ್ರಮವಾಗಿದ್ದು, ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ಬಿಂಬಿಸುತ್ತದೆ ಎಂದು ಟೀಕಿಸಿದರು.
ಕೇಂದ್ರ ಸರ್ಕಾರ ಕೂಡಲೇ ಸೋನಮ್ ವಾಂಗ್ಚುಕ್ ಅವರನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು. ಜೊತೆಗೆ ನೀಟ್ ಪರೀಕ್ಷೆಯ ಅಕ್ರಮಗಳ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಲ್ಲಿ ಪ್ರಮುಖರಾದ ಎಂ.ಎಲ್‌.ಮೂರ್ತಿ, ಕೆ.ಟಿ.ರಾಧಾಕೃಷ್ಣ, ರೇಣುಕಾರಾಧ್ಯ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net