285 ತಂಡಗಳು ಮನೆ ಮನೆಗೆ ಭೇಟಿ ನೀಡಲಿದ್ದು, ಅಭಿಯಾನದಿಂದ ಹೊರಗುಳಿದ ಮಕ್ಕಳಿಗೆ ಪೋಲಿಯೋ ಹನಿ ಹಾಕಲಿವೆೆ. 28 ಮೊಬೈಲ್ ತಂಡಗಳು, 15 ಸಾರಿಗೆ ಮತ್ತು ಟ್ರಾನ್ಸಿಟ್ ತಂಡಗಳು ಸೇರಿ ಒಟ್ಟು 328 ತಂಡಗಳು ಕಾರ್ಯ ನಿರ್ವಹಿಸುತ್ತವೆ. ಒಟ್ಟು 632 ಸಿಬ್ಬಂದಿ ಲಸಿಕೆ ನೀಡಲಿದ್ದು, ಆರೋಗ್ಯ ಇಲಾಖೆಯ ಅಭಿಯಾನದ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಲಿದ್ದಾರೆ ಎಂದರು.