27ಕ್ಕೆ ರಂಭಾಪುರಿ ಪೀಠದ ಜಾತ್ರೆ

ಬಾಳೆಹೊನ್ನೂರು ರಂಭಾಪುರಿ ಪೀಠದ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಪಂ ಮಾಜಿ ಉಪಾಧ್ಯಕ್ಷ ಎಂ.ಎಸ್.ಚನ್ನಕೇಶವ ಗೌಡ ಮಾತನಾಡಿದರು. ಯಡಿಯೂರು ರೇಣುಕ ಶಿವಾಚಾರ್ಯರು, ಸಿದ್ಧರಬೆಟ್ಟ ವೀರಭದ್ರ ಶಿವಾಚಾರ್ಯರು, ಹುಲಿಗೆ ಸೋಮೇಶ್ವರ ಶಿವಾಚಾರ್ಯರು, ಆರ್.ಡಿ.ಮಹೇಂದ್ರ, ಬಸವರಾಜ್, ಚಂದ್ರಮ್ಮ, ಮಹಮ್ಮದ್ ಹನ್ೀ ಇದ್ದರು.
ಬಾಳೆಹೊನ್ನೂರು ರಂಭಾಪುರಿ ಪೀಠದ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಪಂ ಮಾಜಿ ಉಪಾಧ್ಯಕ್ಷ ಎಂ.ಎಸ್.ಚನ್ನಕೇಶವ ಗೌಡ ಮಾತನಾಡಿದರು. ಯಡಿಯೂರು ರೇಣುಕ ಶಿವಾಚಾರ್ಯರು, ಸಿದ್ಧರಬೆಟ್ಟ ವೀರಭದ್ರ ಶಿವಾಚಾರ್ಯರು, ಹುಲಿಗೆ ಸೋಮೇಶ್ವರ ಶಿವಾಚಾರ್ಯರು, ಆರ್.ಡಿ.ಮಹೇಂದ್ರ, ಬಸವರಾಜ್, ಚಂದ್ರಮ್ಮ, ಮಹಮ್ಮದ್ ಹನ್ೀ ಇದ್ದರು.
Published on
ಬಾಳೆಹೊನ್ನೂರು: ಬಾಳೆಹೊನ್ನೂರು ರಂಭಾಪುರಿ ಪೀಠದ ಜಾತ್ರಾ ಮಹೋತ್ಸವ ೆ.27ರಿಂದ ನಡೆಯಲಿದ್ದು ಧರ್ಮ ಮತ್ತು ಸಂಸ್ಕೃತಿಗೆ ಒತ್ತು ನೀಡುವ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ ಅರ್ಥಪೂರ್ಣವಾಗಿ ನಡೆಸಲಾಗುವುದು ಎಂದು ರಂಭಾಪುರಿ ಶಾಖಾ ಮಠ ಯಡಿಯೂರು ಕ್ಷೇತ್ರದ ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ರಂಭಾಪುರಿ ಪೀಠದ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ವೀರಭದ್ರಸ್ವಾಮಿ ಮಹಾ ರಥೋತ್ಸವ ಹಿನ್ನೆಲೆಯಲ್ಲಿ ರಂಭಾಪುರಿ ಪೀಠದಲ್ಲಿ ಸೋಮವಾರ ನಡೆದ ಗಣ್ಯರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಈ ಬಾರಿಯ ಜಾತ್ರಾ ಮಹೋತ್ಸವವನ್ನು ಸ್ಥಳೀಯರು, ಸರ್ವ ಧರ್ಮದವರ ಸಹಕಾರದಿಂದ ಅತ್ಯಂತ ಯಶಸ್ವಿಯಾಗಿ ನಡೆಸಬೇಕು ಎಂದು ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಆಶಯ ವ್ಯಕ್ತಪಡಿಸಿದ್ದು ಈ ನಿಟ್ಟಿನಲ್ಲಿ ಸ್ಥಳೀಯ ಗಣ್ಯರ ಸಭೆಯನ್ನು ನಡೆಸಲಾಗುತ್ತಿದೆ.
ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳನ್ನು ಕ್ರೋಡೀಕರಿಸಿ ಅವುಗಳಲ್ಲಿ ಯಾವುದನ್ನು ಅನುಷ್ಠಾನಕ್ಕೆ ತರಬಹುದು ಎಂಬುದನ್ನು ಯೋಚಿಸಿ, ಜಗದ್ಗುರುಗಳ ಗಮನಕ್ಕೆ ತಂದು ಕಾರ್ಯರೂಪಕ್ಕೆ ತರಲಾಗುವುದು. ಧರ್ಮ ಸಭೆಗೆ ರಾಜಕಾರಣಿಗಳ ಅಗತ್ಯವೂ ಇದ್ದು ಅವರನ್ನು ಪ್ರತಿ ಬಾರಿಯಂತೆಯೇ ಆಹ್ವಾನಿಸಲಾಗುವುದು. ಜಾತ್ರಾ ಮಹೋತ್ಸವಕ್ಕೆ ಆಟೋ ಮೂಲಕ ಪ್ರಚಾರ ನಡೆಸುವುದು, ಮನೆಮನೆಗೆ ಕರಪತ್ರ ಹಂಚಿಕೆ, ಬಿತ್ತಿಪತ್ರದ ಮೂಲಕ ಪ್ರಚಾರ ನಡೆಸಲು ಸ್ಥಳೀಯರು ಸಿದ್ಧತೆ ಮಾಡಿಕೊಳ್ಳಬೇಕು. ಹೊರೆ ಕಾಣಿಕೆ ಸ್ವೀಕಾರ, ಪಟ್ಟಣದಿಂದ ರಂಭಾಪುರಿ ಪೀಠಕ್ಕೆ ಜಗದ್ಗುರುಗಳ ಮೆರವಣಿಗೆ ನಡೆಸಲು ಸಿದ್ಧತೆ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸಿದ್ಧರಬೆಟ್ಟ ಕ್ಷೇತ್ರದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ವಿಹಿಂಪ ಹಾಸನ ವಿಭಾಗದ ಕಾರ್ಯದರ್ಶಿ ಆರ್.ಡಿ.ಮಹೇಂದ್ರ, ಹುಲಿಗೆ ಹಿರೇಮಠದ ಶ್ರೀ ಸೋಮೇಶ್ವರ ಶಿವಾಚಾರ್ಯರು, ಜಗದ್ಗುರು ರೇಣುಕಾಚಾರ್ಯ ಟ್ರಸ್ಟ್ ಅಧ್ಯಕ್ಷ ಬಸವರಾಜ್ ಉಪ್ಪಳ್ಳಿ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಚಂದ್ರಮ್ಮ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net