

ಪ್ರಮುಖ ಮುಖ್ಯಾಂಶಗಳು
ಬಾಳೆಹೊನ್ನೂರು: ಹುಯಿಗೆರೆ ಗ್ರಾಪಂ ವ್ಯಾಪ್ತಿಯ ಮಣಬೂರು ಗ್ರಾಮದಲ್ಲಿ ಹದಗೆಟ್ಟಿದ್ದ ಸುಮಾರು ಮೂರೂವರೆ ಕಿಲೋ ಮೀಟರ್ ರಸ್ತೆಯನ್ನು ಗ್ರಾಮಸ್ಥರೇ ದುರಸ್ತಿಪಡಿಸಿಕೊಂಡು ಸಂಚಾರಕ್ಕೆ ಸುಗಮಗೊಳಿಸಿಕೊಂಡಿದ್ದಾರೆ. ಹುಯಿಗೆರೆ ಗ್ರಾಪಂ ವ್ಯಾಪ್ತಿಯ ಮಣಬೂರು ಗ್ರಾಮದಲ್ಲಿ ಹಲವಾರು ವರ್ಷಗಳಿಂದ ರಸ್ತೆಯು ಹೊಂಡ ಗುಂಡಿಗಳಿಂದ ಕೂಡಿದ್ದು, ಸಂಚಾರಕ್ಕೆ ತೀವ್ರ ತೊಂದರೆಯಾಗಿತ್ತು. ಈ ಹಿನ್ನೆಲೆಯಲ್ಲಿ ಸ್ಥಳೀಯರೇ ಹಣ ವಿನಿಯೋಗಿಸಿ ಮೂರೂವರೆ ಕಿಲೋ ಮೀಟರ್ ರಸ್ತೆಯನ್ನು ದುರಸ್ತಿಪಡಿಸಿಕೊಂಡಿದ್ದಾರೆ. ಮೂರು ವರ್ಷಗಳಿಂದಲೂ ಗ್ರಾಮಸ್ಥರೇ ಈ ರೀತಿಯಾಗಿ ಗ್ರಾಮದ ರಸ್ತೆಯನ್ನು ದುರಸ್ತಿಪಡಿಸಿಕೊಳ್ಳುತ್ತಿದ್ದೇವೆ ಎಂದು ಸ್ಥಳೀಯ ಸಂದೀಪ್ ಗೌಡ ತಿಳಿಸಿದ್ದಾರೆ.