ಶೋಭಾ ಅಜ್ಜಂಪುರ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ

ಅಜ್ಜಂಪುರ ಪಪಂ ನೂತನ ಉಪಾಧ್ಯಕ್ಷೆಯಾಗಿ ಅವಿರೋಧ ಆಯ್ಕೆಯಾದ ಶೋಭಾ ಅವರನ್ನು ಮಾಜಿ ಶಾಸಕ ಡಿ.ಎಸ್.ಸುರೇಶ್ ಅಭಿನಂದಿಸಿದರು.
ಅಜ್ಜಂಪುರ ಪಪಂ ನೂತನ ಉಪಾಧ್ಯಕ್ಷೆಯಾಗಿ ಅವಿರೋಧ ಆಯ್ಕೆಯಾದ ಶೋಭಾ ಅವರನ್ನು ಮಾಜಿ ಶಾಸಕ ಡಿ.ಎಸ್.ಸುರೇಶ್ ಅಭಿನಂದಿಸಿದರು.
Published on
ತರೀಕೆರೆ: ಅಜ್ಜಂಪುರ ಪಟ್ಟಣ ಪಂಚಾಯಿತಿ ನೂತನ ಉಪಾಧ್ಯಕ್ಷೆಯಾಗಿ 11ನೇ ವಾರ್ಡ್‌ನ ಬಿಜೆಪಿ ಬೆಂಬಲಿತ ಸದಸ್ಯ ಶೋಭಾ ಅವಿರೋಧ ಆಯ್ಕೆಯಾದರು.
ಹಿಂದಿನ ಉಪಾಧ್ಯಕ್ಷೆ ಕವಿತಾ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಶನಿವಾರ ಚುನಾವಣೆ ನಿಗದಿಯಾಗಿತ್ತು. ಶೋಭಾ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ತಹಸೀಲ್ದಾರ್ ವಿನಾಯಕ್ ಸಾಗರ್ ನೂತನ ಉಪಾಧ್ಯಕ್ಷರ ಅವಿರೋಧ ಆಯ್ಕೆ ಘೋಷಿಸಿದರು.
ನೂತನ ಉಪಾಧ್ಯಕ್ಷೆಯನ್ನು ಅಭಿನಂದಿಸಿ ಮಾಜಿ ಶಾಸಕ ಡಿ.ಎಸ್.ಸುರೇಶ್ ಮಾತನಾಡಿ, ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿದಿರುವ ಪಟ್ಟಣ ಪಂಚಾಯಿತಿಯಲ್ಲಿ ಅಭಿವೃದ್ಧಿಗೆ ಮೊದಲ ಅದ್ಯತೆ ನೀಡಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರ ಸಮಸ್ಯೆಗೆ ಸಕಾರಾತ್ಮಕ ಸ್ಪಂದನೆ ನೀಡಿ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದರು.
ವರುಣನ ಅಪಕೃಪೆಯಿಂದ ಬರದ ಛಾಯೆ ಆವರಿಸುವ ಸಾಧ್ಯತೆ ದಟ್ಟವಾಗಿದ್ದು, ಕುಡಿಯುವ ನೀರಿನ ಸಮಸ್ಯೆ ತೀವ್ರಗೊಳ್ಳುವ ಸೂಚನೆ ಗೋಚರಿಸಿದೆ. ನೂತನ ಉಪಾಧ್ಯಕ್ಷರು ಆಡಳಿತ ಮಂಡಳಿ ಜತೆ ಸಮನ್ವಯ ಸಾಧಿಸಿ ಪರಿಹಾರ ಕಂಡುಕೊಳ್ಳಬೇಕು ಹಾಗೂ ಪಟ್ಟಣದ ಸ್ವಚ್ಛತೆ ಕಡೆ ಹೆಚ್ಚಿನ ಗಮನಹರಿಸಿ ಪಟ್ಟಣದ ಜನರ ಆರೋಗ್ಯ ಕಾಪಾಡಬೇಕು ಎಂದು ಹೇಳಿದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷ ಎ.ಜೆ.ರೇವಣ್ಣ, ಸದಸ್ಯರಾದ ಬಿ.ರಂಗಸ್ವಾಮಿ, ಮಧುಸೂದನ್ ಅತ್ತತ್ತಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ಆರ್.ದೇವರಾಜ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನರೇಂದ್ರ, ಮಂಡಲ ಅಧ್ಯಕ್ಷ ಜಿ.ಇ.ಪ್ರತಾಪ್, ಜಿಪಂ ಮಾಜಿ ಸದಸ್ಯ ಎಂ.ಕೃಷ್ಣಮೂರ್ತಿ, ಪಪಂ ಮುಖ್ಯಾಧಿಕಾರಿ ಟಿ.ಜಿ.ರಮೇಶ್, ಪ್ರಮುಖರಾದ ಗಿರೀಶ್ ಚವ್ಹಾಣ್, ಮಿಲ್ಟ್ರೀ ಶ್ರೀನಿವಾಸ್, ಚನ್ನೇಗೌಡ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net