ಶ್ರೀ ರೇಣುಕಾಚಾರ್ಯರ ಜಯಂತಿ ಯುಗಮಾನೋತ್ಸವ ಜೂ. 10ಕ್ಕೆ

 ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ಕೆ.ಸಿ ನಿಶಾಂತ್
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ಕೆ.ಸಿ ನಿಶಾಂತ್
Published on

ಪ್ರಮುಖ ಮುಖ್ಯಾಂಶಗಳು

  • ಶ್ರೀ ಭಕ್ತಿ ಭಂಡಾರಿ ಬಸವೇಶ್ವರರ ಜಯಂತಿ ಕಾರ್ಯಕ್ರಮ
  • ಜಗದ್ಗುರು ರೇಣುಕಾಚಾರ್ಯರ ಜಯಂತಿ ಯುಗಮಾನೋತ್ಸವ
ಚಿಕ್ಕಮಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಜಗದ್ಗುರು ರೇಣುಕಾಚಾರ್ಯರ ಜಯಂತಿ ಯುಗಮಾನೋತ್ಸವ ಹಾಗೂ ಶ್ರೀ ಭಕ್ತಿ ಭಂಡಾರಿ ಬಸವೇಶ್ವರರ ಜಯಂತಿ ಕಾರ್ಯಕ್ರಮವನ್ನು ಜೂ. 10ರಂದು ಆಯೋಜನೆ ಮಾಡಲಾಗಿದೆ ಎಂದು ಮಹಾಸಭಾ ತಾಲೂಕು ಅಧ್ಯಕ್ಷ ಕೆ.ಸಿ ನಿಶಾಂತ್ ತಿಳಿಸಿದರು.
ನಗರದ ಪ್ರೆಸ್‌ಕ್ಲಬ್ ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಶ್ರೀ ಜಗದ್ಗುರು ರೇಣುಕಾಚಾರ್ಯ ಸಮುದಾಯ ಭವನದಲ್ಲಿ ಜೂ. ೧೦ರ ಬುಧವಾರ ಬೆಳಗ್ಗೆ ೧೦.೩೦ ಕ್ಕೆ ಶಂಕರದೇವರ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹಾಗೂ ಶ್ರೀ ಬಸವತತ್ವ ಪೀಠದ ಶ್ರೀ ಡಾ. ಬಸವ ಮರುಳಸಿದ್ಧ ಸ್ವಾಮಿಜಿ ಅವರ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ ಉದ್ಘಾಟನೆ ನೆಡೆಯಲಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಉಪಾಧ್ಯಕ್ಷ ಸಿ.ಇ ಚೇತನ್, ಕಾರ್ಯದರ್ಶಿ ಎನ್.ಆರ್ ದರ್ಶನ್, ಖಜಾಂಚಿ ಎಂ.ಎನ್ ಹರೀಶ್, ಗಿರೀಶ್, ಕುಮಾರ್, ಜಯಪ್ರಕಾಶ್, ಅಶೋಕ್, ಸುಬ್ರಹ್ಮಣಿ, ಕೀರ್ತನ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net