ಶ್ರೀ ವರಮಹಾಲಕ್ಷ್ಮೀ ಪೂಜೆ

ಬೀರೂರಿನ ರೈಲ್ವೆ ಸ್ಟೇಷನ್ ರಸ್ತೆಯ ಪುರಸಭಾ ಮಾಜಿ ಅಧ್ಯಕ್ಷೆ ಸವಿತಾ ರಮೇಶ್ ಮನೆಯಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ ನೆರವೇರಿಸಲಾಯಿತು.
ಬೀರೂರಿನ ರೈಲ್ವೆ ಸ್ಟೇಷನ್ ರಸ್ತೆಯ ಪುರಸಭಾ ಮಾಜಿ ಅಧ್ಯಕ್ಷೆ ಸವಿತಾ ರಮೇಶ್ ಮನೆಯಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ ನೆರವೇರಿಸಲಾಯಿತು.
Published on

ಪ್ರಮುಖ ಮುಖ್ಯಾಂಶಗಳು

  • ತಳಿರು-ತೋರಣ
  • ವಿಶೇಷವಾಗಿ ಅಲಂಕರಿಸಿ
ಬೀರೂರು: ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರು ಶ್ರೀ ವರಮಹಾಲಕ್ಷ್ಮೀ ಪೂಜೆ ನೆರವೇರಿಸಿ ಹಬ್ಬ ಆಚರಿಸಿದರು. ಬೆಳಗ್ಗೆಯಿಂದಲೇ ಮನೆಗಳನ್ನು ತಳಿರು-ತೋರಣ, ಹೂವುಗಳಿಂದ ಅಲಂಕರಿಸಿ ಪೂಜೆಗೆ ಸಜ್ಜುಗೊಳಿಸಿದರು. 
ವರಮಹಾಲಕ್ಷ್ಮೀ ದೇವಿಯ ಮೂರ್ತಿ ಹಾಗೂ ಕಳಸವನ್ನು ವಿಶೇಷವಾಗಿ ಅಲಂಕರಿಸಿ, ಹಣ್ಣು, ಸಿಹಿತಿಂಡಿ ಸೇರಿದಂತೆ ವಿವಿಧ ನೈವೇದ್ಯ ಮಾಡಿದರು. ಶ್ರೀ ಮಹಾಲಕ್ಷ್ಮೀ ಅಷ್ಟೋತ್ತರ, ಸ್ತೋತ್ರ ಪಠಣ, ಭಜನೆ ಹಾಗೂ ಮಂಗಳಾರತಿ ನೆರವೇರಿಸಿದರು. ಕುಟುಂಬದ ಆರೋಗ್ಯ, ನೆಮ್ಮದಿ ಮತ್ತು ಆರ್ಥಿಕ ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು.
ಪಟ್ಟಣದ ರೈಲ್ವೆ ಸ್ಟೇಷನ್ ರಸ್ತೆಯ ಪುರಸಭಾ ಮಾಜಿ ಅಧ್ಯಕ್ಷೆ ಸವಿತಾ ರಮೇಶ್ ಮನೆಯಲ್ಲಿ ಶ್ರೀ ಲಕ್ಷ್ಮಿ ಮೂರ್ತಿಯನ್ನು ಕಮಲದ ಪೀಠದಲ್ಲಿ ಪ್ರತಿಷ್ಠಾಪಿಸಿದ್ದರು. ಅಷ್ಟ ಲಕ್ಷ್ಮೀಯರ ಸ್ಥಾನದಲ್ಲಿ ಚಿಕ್ಕಹೆಣ್ಣು ಮಕ್ಕಳನ್ನು ಕೂರಿಸಿ ಪಾದ ತೊಳೆದು, ಮಡಿಲು ತುಂಬಿಸಲಾಯಿತು. ಮುತ್ತೈದೆಯರಿಗೆ ಬಾಗಿನ ನೀಡಿ ಆಶೀರ್ವಾದ ಪಡೆದರು. ಮುತ್ತೈದೆಯರು ಶ್ರೀ ವರಮಹಾಲಕ್ಷ್ಮೀಗೆ ಆರತಿ ಮಾಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net