

ತರೀಕೆರೆ, ಕಡೂರು, ಅಜ್ಜಂಪುರ ತಾಲೂಕಿನಲ್ಲಿ ಮಳೆ ಅಬಾವದಿಂದ ಬರ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಕುಡಿಯುವ ನೀರಿಗೆ ಸಮಸ್ಯೆ ಉಲ್ಬಣಗೊಳ್ಳದಂತೆ ಭದ್ರಾ ಮೇಲ್ಡಂಡೆ ಯೋಜನೆ ನಾಲೆಗಳ ಮೂಲಕ ತಕ್ಷಣ ನೀರು ಹರಿಸುವುದಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಇಂಧನ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.