ತಿಗಡ ಗ್ರಾಪಂ ಅರಿವು ಕೇಂದ್ರದಲ್ಲಿ ನಡೆಯುತ್ತಿರುವ ಬೇಸಿಗೆ ಬೆಸುಗೆ ಶಿಬಿರದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ತರಬೇತಿ, ಅಂಚೆ, ಕಂದಾಯ, ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳಿಗೆ ನೇರವಾಗಿ ಭೇಟಿ ನೀಡಿ ಆಯಾ ಕಚೆೇರಿಗಳ ಕಾರ್ಯಚಟುವಟಿಕೆಗಳ ಸಮಗ್ರ ಪರಿಚಯ ಮಾಡಿಸುತ್ತಿರುವುದರಿಂದ ಮುಂದಿನ ಭವಿಷ್ಯಕ್ಕೆ ಮಕ್ಕಳಿಗೆ ಮಾರ್ಗದರ್ಶನ ನೀಡಿದಂತಾಗುತ್ತಿದೆ ಎಂದು ತಿಳಿಸಿದರು.