ಪೊಲೀಸರು ಎರಡೂ ಪಕ್ಷಗಳ ಕಾರ್ಯಕರ್ತರ ವಿರುದ್ಧ ಸಮಾನ ರೀತಿಯಲ್ಲಿ ಕ್ರಮ ಕೈಗೊಂಡಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ. ಗಲಾಟೆ ನಡೆದ ವೇಳೆ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ತಿಳಿದುಬಂದಿದೆ. ಈ ಘಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ರಸ್ತೆ ಕಾಮಗಾರಿ ವೀಕ್ಷಣೆಗೆ ತೆರಳಿದ್ದ ಸಿ.ಟಿ.ರವಿ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಯತ್ನ ನಡೆಸಿದ್ದಾರೆ ಎಂದು ಆರೋಪಿಸಿರುವ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಇದೇ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ. ಮಾಜಿ ಸಚಿವರಿಗೇ ರಕ್ಷಣೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಘಟನೆ ಕುರಿತು ಮುಖ್ಯಮಂತ್ರಿ ಉತ್ತರ ನೀಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ. ಘಟನೆ ಸಂಬAಧ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಪ್ರಕರಣ ಮತ್ತಷ್ಟು ರಾಜಕೀಯ ಸ್ವರೂಪ ಪಡೆಯುವ ಸಾಧ್ಯತೆ ಇದೆ.