ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಮತ ಎಣಿಕೆಯ ಮೂಲ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ದಾಖಲೆಗಳ ಕೂಲಂಕಷ ಪರಿಶೀಲನೆ ಹಾಗೂ ವಾದ-ಪ್ರತಿವಾದಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ ೧೦ಕ್ಕೆ ನಿಗದಿಪಡಿಸಿದ್ದು, ನ್ಯಾಯಾಲಯದ ಅಂತಿಮ ತೀರ್ಪಿನ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.