ಉಪ ವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಪ್ರಸಕ್ತ ವರ್ಷ ಅಜ್ಜಂಪುರ ತಾಲೂಕಿನಲ್ಲಿ 4,785, ತರೀಕೆರೆ ತಾಲೂಕಿನಲ್ಲಿ 10,742 ಸೇರಿ ಒಟ್ಟು 15,527 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಪಾಲಕರು 0-5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸುವುದನ್ನು ಮರೆಯಬಾರದು ಎಂದರು.