ಮಕ್ಕಳಿಗೆ ಜೀವನ ಮೌಲ್ಯಗಳ ಶಿಕ್ಷಣ ನೀಡಿ

ಪಂಚನಹಳ್ಳಿಯಲ್ಲಿ ಸೈಬರ್ ಭದ್ರತೆ ಕುರಿತು ಮಕ್ಕಳಿಗೆ ಅರಿವು ಕಾರ್ಯಕ್ರಮವನ್ನು ಮಹಾಂತೇಶ್ ಭಜಂತ್ರಿ ಉದ್ಘಾಟಿಸಿದರು. ಶಾಹಿದ್ ಅಫ್ರಿದಿ, ಪಿ.ಆರ್.ಸಂತೋಷ್, ರಂಗನಾಥ್, ರಾಜೇಶ್, ವಿರೂಪಾಕ್ಷಪ್ಪ ಇದ್ದರು.
ಪಂಚನಹಳ್ಳಿಯಲ್ಲಿ ಸೈಬರ್ ಭದ್ರತೆ ಕುರಿತು ಮಕ್ಕಳಿಗೆ ಅರಿವು ಕಾರ್ಯಕ್ರಮವನ್ನು ಮಹಾಂತೇಶ್ ಭಜಂತ್ರಿ ಉದ್ಘಾಟಿಸಿದರು. ಶಾಹಿದ್ ಅಫ್ರಿದಿ, ಪಿ.ಆರ್.ಸಂತೋಷ್, ರಂಗನಾಥ್, ರಾಜೇಶ್, ವಿರೂಪಾಕ್ಷಪ್ಪ ಇದ್ದರು.
Published on
ಪಂಚನಹಳ್ಳಿ: ಮಕ್ಕಳಿಗೆ ಮೂಲ ಸೌಕರ್ಯಗಳನ್ನು ಒದಗಿಸಿ ಕಲಿಕೆಗೆ ಪ್ರೋತ್ಸಾಹಿಸಬೇಕು. ಅಕ್ಷರ ಅಭ್ಯಾಸದ ಜತೆಗೆ ಜೀವನ ಮೌಲ್ಯಗಳ ಶಿಕ್ಷಣ ನೀಡುವುದು ನಮ್ಮೆಲ್ಲರ ಕರ್ತವ್ಯ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತೇಶ್ ಭಜಂತ್ರಿ ತಿಳಿಸಿದರು.
ಮಕ್ಕಳ ರಕ್ಷಣಾ ಸಂಬಂಧಿ ಕಾಯ್ದೆಗಳು ಹಾಗೂ ಸೈಬರ್ ಭದ್ರತೆಯ ಕುರಿತು ಮಂಗಳವಾರ ಏರ್ಪಡಿಸಿದ್ದ ಮಕ್ಕಳಿಗೆ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳು ದೇಶದ ಆಸ್ತಿ. ಅವರನ್ನು ಉತ್ತಮ ಪ್ರಜೆಗಳನ್ನಾಗಿ ಮಾಡುವ ಕರ್ತವ್ಯ ಶಿಕ್ಷಕರು ಮತ್ತು ಪಾಲಕರ ಮೇಲಿದೆ ಎಂದು ತಿಳಿಸಿದರು.
ಪಂಚನಹಳ್ಳಿ ಪೊಲೀಸ್ ಉಪನಿರೀಕ್ಷಕ ಶಾಹಿದ್ ಅಫ್ರಿದಿ ಮಾತನಾಡಿ, ಮಕ್ಕಳು ಪುಸ್ತಕಗಳಿಗಿಂತ ಮೊಬೈಲ್ ಜತೆ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಇದು ಶಿಕ್ಷಣದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ತಿಳಿಸಿದರು.
ಗ್ರಾಪಂ ಅಧ್ಯಕ್ಷ ಪಿ.ಆರ್.ಸಂತೋಷ್ ಮಾತನಾಡಿ, ಮಕ್ಕಳು ದುಶ್ಚಟಗಳಿಗೆ ಬಲಿಯಾಗದೆ ವಿದ್ಯಾಭ್ಯಾಸದ ಕಡೆ ಹೆಚ್ಚು ಗಮನ ನೀಡಬೇಕು ಎಂದು ತಿಳಿಸಿದರು. ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಗಂಗಾಧರಯ್ಯ, ಶಿಕ್ಷಕರಾದ ವಿರೂಪಾಕ್ಷಪ್ಪ, ಗ್ರಾಪಂ ಸದಸ್ಯ ಪಿ.ಆರ್.ರಂಗನಾಥ್, ರಾಜೇಶ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net