ಸಂವಿಧಾನದಿಂದ ಮಹಿಳೆಯರಿಗೆ ಮತದಾನದ ಹಕ್ಕು

ಬೀರೂರಿನನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಎದುರಿರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಸವಿತಾ ರಮೇಶ್ ಮಾಲಾರ್ಪಣೆ ಮಾಡಿದರು.
ಬೀರೂರಿನನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಎದುರಿರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಸವಿತಾ ರಮೇಶ್ ಮಾಲಾರ್ಪಣೆ ಮಾಡಿದರು.
Published on
ಬೀರೂರು: ಮಹಿಳೆಯರಿಗೆ ಹಕ್ಕು ಮತ್ತು ಸ್ವಾತಂತ್ರ್ಯ ಶಕ್ತಿ ನೀಡುವ ಮೂಲಕ ಮತದಾನದ ಹಕ್ಕು ಡಾ. ಬಿ.ಆರ್.ಅಂಬೇಡ್ಕರ್ ಅವರು ನೀಡಿರುವ ಕೊಡುಗೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ಸವಿತಾ ರಮೇಶ್ ಹೇಳಿದರು.
ಬೀರೂರಿನ ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣದ ದುರು ಟ್ಯಾಕ್ಸಿ ನಿಲ್ದಾಣದಲ್ಲಿರುವ ಬಿ.ಆರ್.ಅಂಬೇಡ್ಕರ್ ರವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿ, ಜಗತ್ತಿನಲ್ಲೇ ದೊಡ್ಡ ಮತ್ತು ವಿಶೇಷ ಸಂವಿಧಾನವಾಗಿದ್ದು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಬದುಕಲು ಸ್ವಾತಂತ್ರ್ಯವನ್ನು ನೀಡಿ ಎಲ್ಲ ಸೌಲಭ್ಯಗಳನ್ನು ಕಲ್ಪಸಿಕೊಟ್ಟಿದೆ. ಸಮ ಸಮಾಜ ನಿರ್ಮಾಣಕ್ಕೆ ಅಡಿಪಾಯ ಹಾಕಿದ ಅವರು ಒಬ್ಬ ಸಾಮಾನ್ಯ ದೇಶದ ಅತ್ಯುನ್ನತ ಸ್ಥಾನ ಏರುವ ಕನಸನ್ನು ನನಸಾಗಿಸಿದ್ದಾರೆ. ಸಂವಿಧಾನವನ್ನು ಪ್ರತಿಯೊಬ್ಬ ಭಾರತೀಯನೂ ಸ್ಮರಿಸಿಕೊಳ್ಳಬೇಕು ಎಂದರು.
ಪುರಸಭೆ ಮಾಜಿ ಸದಸ್ಯ ರುದ್ರಪ್ಪ ಮಾತನಾಡಿ, ಅಂಬೇಡ್ಕರ್ ಜೀವನ ನಮ್ಮೆಲ್ಲರಿಗೂ ಮಾದರಿಯಾಗಿದೆ. ಅವರು ಕೊಟ್ಟಂತಹ ಸಂವಿಧಾನ ನಮಗೆ ಪವಿತ್ರ ಗ್ರಂಥವಾಗಿದೆ ಎಂದು ತಿಳಿಸಿದರು.
ಕಡೂರು ತಾಲೂಕು ಬಿಜೆಪಿ ಘಟಕದ ಕಾರ್ಯದರ್ಶಿ ಶಬರೀಶ್, ಸುಪ್ರೀತ್, ಭಜರಂಗದಳ ಸಂಚಾಲಕಾರದ ಮಧು, ಟ್ಯಾಕ್ಸಿ ಚಾಲಕರು ಮತ್ತು ಬಿಜೆಪಿ ಕಾರ್ಯಕರ್ತರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net