ಕನ್ನಡದಿಂದ ನಾಡಿನ ಸಂಸ್ಕೃತಿ, ಸಾಹಿತ್ಯ ವೃದ್ಧಿ

ಮೂಡಿಗೆರೆಯಲ್ಲಿ  ಕಸಾಪ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಮೂಡಿಗೆರೆಯಲ್ಲಿ ಕಸಾಪ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
Published on
ಮೂಡಿಗೆರೆ: ಕರ್ನಾಟಕದಲ್ಲಿ ಹಲವಾರು ಭಾಷೆಗಳು ಚಾಲ್ತಿಯಲ್ಲಿದ್ದರೂ ಕೂಡ ಕನ್ನಡವನ್ನು ಮಾತೃ ಭಾಷೆಯಾಗಿ ಸ್ವೀಕರಿಸಿ ಪ್ರತಿಯೊಬ್ಬರೂ ಕನ್ನಡವನ್ನು ಸಮರ್ಪಕವಾಗಿ ಬಳಸುವುದರಿಂದ ಕನ್ನಡಕ್ಕೆ ಹೆಚ್ಚಿನ ಮನ್ನಣೆ ದೊರೆತಿದೆ. ಇದರಿಂದ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ ಬೆಳೆಯಲು ಸಾಧ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮೀನಾಕ್ಷಿ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದ ಸಭಾ ಭವನದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನಿಂದ ಪರಿಷತ್ ಸಂಸ್ಥಾಪನಾ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, 1915ರಲ್ಲಿ ಸ್ಥಾಪಿತವಾದ ಕನ್ನಡ ಸಾಹಿತ್ಯ ಪರಿಷತ್ ಕನ್ನಡದ ಶ್ರೀಮಂತ ಪರಂಪರೆಯನ್ನು ಕಾಪಾಡಲು ಮಹತ್ವದ ಪಾತ್ರವಹಿಸಿದೆ. ಅನೇಕ ಸಾಹಿತ್ಯ ಸಮ್ಮೇಳನ, ಕವಿಗೋಷ್ಠಿ, ಪುಸ್ತಕ ಪ್ರಕಟಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ಕನ್ನಡದ ಕೀರ್ತಿ ಜಗತ್ತಿನಾದ್ಯಂತ ಹರಡುತ್ತಿದೆ ಎಂದರು.
ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕಸಾಪ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಿರ್ಮಲಾ ಮಂಚೇಗೌಡ, ನಿಕಟಪೂರ್ವ ಅಧ್ಯಕ್ಷ ಶಾಂತಕುಮಾರ್, ಪ್ರಧಾನ ಕಾರ್ಯದರ್ಶಿ ಸುಚಿತ್ರ ಪ್ರಸನ್ನ, ಲೋಕೇಶ್, ಕಸಾಪ ಯುವ ಘಟಕದ ತಾಲೂಕು ಅಧ್ಯಕ್ಷ ಚಂದ್ರು ಒಡೆಯರ್, ಮಹಿಳಾ ಘಟಕದ ಅಧ್ಯಕ್ಷೆ ರೇಖಾ ರವಿರಾಜ್, ಕಸಬಾ ಹೋಬಳಿ ಅಧ್ಯಕ್ಷ ಕುನ್ನಳ್ಳಿ ರವಿ, ನವೀನ್ ಆನೆದಿಬ್ಬ, ಆರ್.ಪ್ರಕಾಶ್, ವಿಜಯಲಕ್ಷ್ಮಿ, ವಿದ್ಯಾ, ನಾರಾಯಣ, ನಾಗರಾಜು, ಶೃತಿ ಬ್ರಿಜೇಶ್, ಕಮಲಾ, ದಾಕ್ಷಾಯಿಣಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net