ನಮ್ಮ ಮಾತೃಭಾಷೆಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಎಲ್ಲರೂ ಮಾಡಬೇಕಿದೆ. ಈ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅತ್ಯತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ತಿಳಿಸಿದರು.
ನಗರದ ಕುವೆಂಪು ಕಲಾಮಂದಿರದಲ್ಲಿ ಶನಿವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಸೌರಭ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಿಶಿಷ್ಟವಾದ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಇಲಾಖೆ ತನ್ನ ಹೆಸರಿಗೆ ತಕ್ಕಂತೆ ಅತ್ಯುತ್ತಮ ಕೆಲಸ ಮಾಡುತ್ತಿದೆ ಎಂದರು.
ಇದೇ ಸಂದರ್ಭದಲ್ಲಿ ಗಮಕ ಕಥಾ ಕೀರ್ತನದಲ್ಲಿ ವಾಚನ ಮಾಡಿದ ಸುಮಾ ಪ್ರಸಾದ್, ವ್ಯಾಖ್ಯಾನ ಮಾಡಿದ ಅರುಣ ವೆಂಕಟೇಶ್ ಅವರಿಗೆ ಶಾಸಕ ಎಚ್.ಡಿ.ತಮ್ಮಯ್ಯ ಪ್ರಶಂಸನಾ ಪತ್ರ ವಿತರಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ರಮೇಶ್, ಎ.ಎನ್.ಮಹೇಶ್ ಮತ್ತಿತರರಿದ್ದರು.