ಮತದಾರರ ಪಟ್ಟಿಯಿಂದ ಅರ್ಹರನ್ನು ತೆಗೆಯುವ ಹುನ್ನಾರ

ಶೃಂಗೇರಿಯಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಎಸ್‌ಐಆರ್ ಕುರಿತು ಜಾಗೃತಿ ಅಭಿಯಾನದಲ್ಲಿ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು. ದಿನೇಶ್ ಶೆಟ್ಟಿ, ಕವೀಶ್, ರತ್ನಾಕರ್, ಸಂತೋಶ್ ಕಾಳ್ಯ, ಸುಂದರೇಶ್, ನಾಗೇಂದ್ರ ಇದ್ದರು.
ಶೃಂಗೇರಿಯಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಎಸ್‌ಐಆರ್ ಕುರಿತು ಜಾಗೃತಿ ಅಭಿಯಾನದಲ್ಲಿ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು. ದಿನೇಶ್ ಶೆಟ್ಟಿ, ಕವೀಶ್, ರತ್ನಾಕರ್, ಸಂತೋಶ್ ಕಾಳ್ಯ, ಸುಂದರೇಶ್, ನಾಗೇಂದ್ರ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮಲೆನಾಡು-ಕರಾವಳಿ ಜನಪರ ಒಕ್ಕೂಟ ಆರೋಪ
  • ಶೃಂಗೇರಿಯಲ್ಲಿ ಜನಜಾಗೃತಿ
ಶೃಂಗೇರಿ: ಬಹಳ ಹಿಂದಿನಿಂದಲೂ ಮತದಾರರ ಪಟ್ಟಿಯ ಪರಿಷ್ಕರಣೆ ಸಹಜವಾಗಿ ನಡೆದುಕೊಂಡು ಬರುತ್ತಿದ್ದು, ನಿಧನರಾದವರನ್ನು ಪಟ್ಟಿಯಿಂದ ಕೈಬಿಡಲು ಹಾಗೂ ಹೊಸ ಸೇರ್ಪಡೆಗೆ ಅವಕಾಶವಿದೆ. ಆದರೆ ಪ್ರಸ್ತುತ ವಿಶೇಷ ತೀವ್ರ ಪರಿಷ್ಕರಣೆಗೆ ಕೇಂದ್ರ ಸರ್ಕಾರ ಹೊರಟಿದೆ ಎಂದು ಮಲೆನಾಡು-ಕರಾವಳಿ ಜನಪರ ಒಕ್ಕೂಟದ ಪ್ರಧಾನ ಸಂಚಾಲಕ ಅನಿಲ್ ಹೊಸಕೊಪ್ಪ ಹೇಳಿದರು.
ಬ್ಲಾಕ್ ಕಾಂಗ್ರೆಸ್‌ನಿಂದ ಆಯೋಜಿಸಿದ್ದ ಎಸ್‌ಐಆರ್ ಜಾಗೃತಿ ಅಭಿಯಾನದಲ್ಲಿ ಮಾತನಾಡಿದರು. 13 ರಾಜ್ಯಗಳು ಹಾಗೂ ಮೂರು ಕೇಂದ್ರಾಡಳಿತ ಪ್ರದೇಶಗಳ ಮತಪಟ್ಟಿ ಪರಿಷ್ಕರಣೆಯಲ್ಲಿ ಐದಾರು ಕೋಟಿ ಮತದಾರರನ್ನು ಹೊರಗಿಡಲಾಗಿದೆ. ಮದುವೆಯಾಗಿ ಗಂಡನ ಮನೆಗೆ ಬರುವ ಶೇ.66ರಷ್ಟು ಮಹಿಳೆಯರನ್ನು ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ. ಗ್ರಾಮೀಣ ಪ್ರದೇಶಗಳಿಂದ ನಗರಕ್ಕೆ ಹೋಗುವ ತಳ ಸಮುದಾಯಗಳು, ವಲಸೆ ಕಾರ್ಮಿಕರು, ಅಲೆಮಾರಿಗಳು, ಅಲ್ಪಸಂಖ್ಯಾತರನ್ನು ಹುಡುಕಿ ಮತಪಟ್ಟಿಯಿಂದ ಕಿತ್ತೆಸೆಯಲು ಹುನ್ನಾರ ನಡೆಸುತ್ತಿದ್ದಾರೆ. ನ್ಯಾಯಾಂಗದ ಗಮನಕ್ಕೆ ತಂದರೂ ಅವರಿಗೆ ನ್ಯಾಯ ಸಿಗಲಿಲ್ಲ. ಇದನ್ನ್ನೆಲ್ಲ ಜನಸಾಮಾನ್ಯರಿಗೆ ತಿಳಿಸುವುದು ನಮ್ಮ ಕರ್ತವ್ಯ ಎಂದರು.
ಸಾಹಿತಿ ದೇವನೂರು ಮಹಾದೇವ ರಚಿಸಿದ ಮತದಾರ ಪರಿಷ್ಕರಣೆ ಕುರಿತ ಕೈಪಿಡಿಯನ್ನು ಪಟ್ಟಣದ ಕುವೆಂಪು ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ, ಅಂಗಡಿಗಳು, ಪ್ರಯಾಣಿಕರು ಮುಂತಾದವರಿಗೆ ಹಂಚಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಭಟ್ ಕೊಡ್ತಲ್, ಕಾರ್ಯಾಧ್ಯಕ್ಷ ಅಜಿತ್, ಕಿಗ್ಗಾ ಹೋಬಳಿ ಅಧ್ಯಕ್ಷ ರಾಜ್‌ಕುಮಾರ್, ಕಸಬಾ ಹೋಬಳಿ ಅಧ್ಯಕ್ಷ ಲಕ್ಷ್ಮೀಶ್, ಮುಖಂಡರಾದ ದಿನೇಶ್ ಶೆಟ್ಟಿ, ಕುರದಮನೆ ವೆಂಕಟೇಶ್ ಇತರರಿದ್ದರು. 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net