ರಾಜ್ಯಸರ್ಕಾರ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದವರನ್ನು ಸಂಪೂರ್ಣವಾಗಿ ಕಡೆಗಣಿಸಿ
ಜಿಲ್ಲಾ ಕಾಂಗ್ರೆಸ್ ಮುಖಂಡರು, ಸಚಿವರು, ಶಾಸಕರ ವಿರುದ್ಧ ಕಪ್ಪುಬಾವುಟ ಪ್ರದರ್ಶನದೊಂದಿಗೆ ಪ್ರತಿಭಟನೆ
ಚಿಕ್ಕಮಗಳೂರು:ರಾಜ್ಯಸರ್ಕಾರ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದವರನ್ನು ಸಂಪೂರ್ಣವಾಗಿ ಕಡೆಗಣಿಸಿದ್ದು, ಆಗಸ್ಟ್ ೧೫ರಂದು ಜಿಲ್ಲಾ ಕಾಂಗ್ರೆಸ್ ಮುಖಂಡರು, ಸಚಿವರು, ಶಾಸಕರ ವಿರುದ್ಧ ಕಪ್ಪುಬಾವುಟ ಪ್ರದರ್ಶನದೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ದಲಿತ ಸಂಘಟನೆಗಳ ಮುಖಂಡ ಮರ್ಲೆ ಅಣ್ಣಯ್ಯ ತಿಳಿಸಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಈ ನಿರ್ಧಾರದಿಂದ ಸಂಘಟನೆಗಳು ಹಾಗೂ ಸಮುದಾಯದ ಮುಖಂಡರುಗಳಿಗೆ ತೀವ್ರತರದ ಅಸಮಾಧಾನ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ಎಸ್‌ಸಿ.ಎಸ್‌ಟಿ ಸಮುದಾಯದವರನ್ನು ಗಡೆಗಣಿಸಿ ಸಮುದಾಯದ ಉಪಯೋಗಕ್ಕೆ ಜಮೀನು ಮಂಜೂರು ಮಾಡದಿರುವ ಕುರಿತು ಚರ್ಚಿಸಲು ಶಾಸಕರು ಮತ್ತು ಜಿಲ್ಲಾ ಕಾಂಗ್ರೆಸ್ ಮುಖಂಡರೊಂದಿಗೆ ಚರ್ಚಿಸಲು ಸಭೆ ಆಯೋಜಿಸಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಡಿಎಸ್‌ಎಸ್ ಮುಖಂಡ ದಂಟರಮಕ್ಕಿ ಶ್ರೀನಿವಾಸ್, ಛಲವಾದಿ ಮಹಾಸಭಾ ಮುಖಂಡ ರಘು, ಸರ್ಕಾರಿ ನಿವೃತ್ತ ನೌಕರ ಸಂಘದ ಹರಿಯಪ್ಪ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಪ್ರಧಾನ ಸಂಚಾಲಕ ಮಂಜಯ್ಯ ಬಾಚಿಗನಹಳ್ಳಿ, ಜಿಲ್ಲಾ ಸಂಘಟನಾ ಸಂಚಾಲಕ ಪುಟ್ಟಸ್ವಾಮಿ, ವೀರಭದ್ರಯ್ಯ, ಭೀಮ್ ಆರ್ಮಿಯ ರಾಕೇಶ್ ಇದ್ದರು.