ಹಾಂದಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲುಗಡೆಗೆ ಕೂಡಿ ಬಂದ ಕಾಲ

ಹಾಂದಿ ಗ್ರಾಮದಲ್ಲಿ ಕೆಎಸ್‌ಆರ್‌ಟಿಸಿ ವೇಗದೂತ ಬಸ್‌ಗೆ ಗ್ರಾಮಸ್ಥರು ಹಾರ ಹಾಕಿ ಸ್ವಾಗತಿಸಿದರು.
ಹಾಂದಿ ಗ್ರಾಮದಲ್ಲಿ ಕೆಎಸ್‌ಆರ್‌ಟಿಸಿ ವೇಗದೂತ ಬಸ್‌ಗೆ ಗ್ರಾಮಸ್ಥರು ಹಾರ ಹಾಕಿ ಸ್ವಾಗತಿಸಿದರು.
Published on
ಆಲ್ದೂರು: ಮೂಡಿಗೆರೆ-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ 173ರಲ್ಲಿರುವ ಹಾಂದಿ ಗ್ರಾಮದಲ್ಲಿ ಕೆಎಸ್‌ಆರ್‌ಟಿಸಿ ವೇಗದೂತ ಬಸ್‌ಗಳು ನಿಲುಗಡೆ ಆರಂಭಿಸಿದ್ದು, ಗ್ರಾಮಸ್ಥರು ಬಸ್‌ಗೆ ಹಾರ ಹಾಕಿ ಸ್ವಾಗತಿಸಿದರು.
ಸುಮಾರು ನಾಲ್ಕು ಗ್ರಾಮ ಪಂಚಾಯಿತಿ ವ್ಯಾಪ್ತಿಯ 25 ಜನರು, ಉಡುಪಿ, ಕಾರ್ಕಳ, ಮಂಗಳೂರಿಗೆ ತೆರಳುವ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಈ ಮಾರ್ಗದಲ್ಲಿ ನಿತ್ಯ ಸಂಚರಿಸುತ್ತಾರೆ. ಇಲ್ಲಿ ವೇಗದೂತ ಬಸ್‌ಗಳು ನಿಲುಗಡೆ ಮಾಡದಿರುವುದರಿಂದ ಗ್ರಾಮಸ್ಥರು ತೊಂದರೆ ಅನುಭವಿಸುವಂತಾಗಿತ್ತು. ಇದನ್ನು ಮನಗಂಡ ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ಅಬ್ದುಲ್ ರೆಹಮಾನ್, ಹಾಂದಿ ಗ್ರಾಮದಲ್ಲಿ ರಾಜ್ಯ ಸಾರಿಗೆ, ವಾಯವ್ಯ ಕರ್ನಾಟಕ ಸಾರಿಗೆ, ಕಲ್ಯಾಣ ಕರ್ನಾಟಕ ಸಾರಿಗೆ ಬಸ್‌ಗಳ ನಿಲುಗಡೆಗೆ ಆದೇಶ ನೀಡಬೇಕೆಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಸಲ್ಲಿಸಿದ್ದರು. ಮನವಿಗೆ ಸ್ಪಂದಿಸಿದ ಸಚಿವರು ಹಾಂದಿ ಗ್ರಾಮದಲ್ಲಿ ಬಸ್ ನಿಲುಗಡೆಗೆ ಆದೇಶ ಮಾಡಿದ್ದಾರೆ.
ಹಾಂದಿ ಗ್ರಾಮದಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲುಗಡೆಗೆ ಒತ್ತಾಯಿಸಿ 2021ರಲ್ಲಿ ಅಂದಿನ ಸಾರಿಗೆ ಸಚಿವ ಶ್ರೀರಾಮುಲು ಅವರಿಗೆ ಮನವಿ ಸಲ್ಲಿಸಲಾಗಿತ್ತು. ಆ ವೇಳೆ ಕರೊನಾ ಹಿನ್ನೆಲೆಯಲ್ಲಿ ಮನವಿಗೆ ಸ್ಪಂದನೆ ಸಿಕ್ಕಿರಲಿಲ್ಲ. ಈಗ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಸಲ್ಲಿಸಿದ್ದರಿಂದ ಮನವಿಗೆ ಸ್ಪಂದಿಸಿ ಶುಕ್ರವಾರದಿಂದ ಹಾಂದಿ ಗ್ರಾಮದ ಸರ್ಕಲ್‌ನಲ್ಲಿ ಬಸ್ ನಿಲುಗಡೆ ಮಾಡಲಾಗುತ್ತಿದೆ. ಎನ್ನುತ್ತಾರೆ ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ಅಬ್ದುಲ್ ರೆಹಮಾನ್.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net