ಬರ್ಕ ಬೇಟೆಯಾಡಿದ ಮೂವರ ಬಂಧನ

ಚಿಕ್ಕಮಗಳೂರು ತಾಲೂಕಿನ ಅತ್ತಿಗುಂಡಿ ಸಮೀಪ ಬರ್ಕ ಬೇಟೆಯಾಡಿದ ಮೂವರು ಆರೋಪಿಗಳನ್ನು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿ, ಪ್ರಾಣಿಯ ಕಳೆಬರ ಹಾಗೂ ಬೇಟೆಯಾಡಲು ಉಪಯೋಗಿಸಿದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಅತ್ತಿಗುಂಡಿ ಸಮೀಪ ಬರ್ಕ ಬೇಟೆಯಾಡಿದ ಮೂವರು ಆರೋಪಿಗಳನ್ನು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿ, ಪ್ರಾಣಿಯ ಕಳೆಬರ ಹಾಗೂ ಬೇಟೆಯಾಡಲು ಉಪಯೋಗಿಸಿದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
Published on

ಪ್ರಮುಖ ಮುಖ್ಯಾಂಶಗಳು

  • ಜಿಂಕೆ ಜಾತಿಗೆ ಸೇರಿದ ಬರ್ಕ
  • ಸಿಐಡಿ ಅರಣ್ಯ ಸಂಚಾರಿ ದಳದ ಪೊಲೀಸರು
ಚಿಕ್ಕಮಗಳೂರು: ಜಿಂಕೆ ಜಾತಿಗೆ ಸೇರಿದ ಬರ್ಕ (ಮೌಸ್ ಡೀರ್) ಬೇಟೆಯಾಡಿದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಸಿಐಡಿ ಅರಣ್ಯ ಸಂಚಾರಿ ದಳದ ಪೊಲೀಸರು ಯಶಸ್ವಿಯಾಗಿದ್ದಾರೆ. ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರಿಗೆ ದೊರೆತ ಮಾಹಿತಿ ಮೇರೆಗೆ ಚಿಕ್ಕಮಗಳೂರು ಅತ್ತಿಗುಂಡಿ ಗ್ರಾಮದಿಂದ ಮಲಗಾರು ಗ್ರಾಮಕ್ಕೆ ಹೋಗುವ ಕಚ್ಚಾರಸ್ತೆಯಲ್ಲಿ ಕಾಡು ಪ್ರಾಣಿಗಳನ್ನು ಬೇಟೆಯಾಡಿದ ಮೂವರನ್ನು ಬಂಧಿಸಲಾಗಿದೆ.
ತರಿಕೆರೆ ತಾಲೂಕು ಕಲ್ಲತ್ತಿಪುರದ ವೆಂಕಟರಮಣ, ತಿರುವಣ್ಣಾಮಲೈ ಜಿಲ್ಲೆಯ ಕುಂಬಳೂರು ಗ್ರಾಮದ ಕನ್ನಿಯಪ್ಪನ್ ಹಾಗೂ ವಲ್ಲಿಯೂರು ಗ್ರಾಮದ ಸುರೇಶ್ ಬಂಧಿತ ಆರೋಪಿಗಳಾಗಿದ್ದಾರೆ. ಇವರು ಜಿಂಕೆ ಜಾತಿಗೆ ಸೇರಿದ ಬರ್ಕವನ್ನು ಬೇಟೆಯಾಡಿದ್ದರು. ಇವರಿಂದ ಪ್ರಾಣಿಯ ಕಳೆಬರ ಹಾಗೂ ಬೇಟೆಯಾಡಲು ಉಪಯೋಗಿಸಿದ ವಸ್ತುಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಬೆಂಗಳೂರು ಸಿಐಡಿ ಅರಣ್ಯ ಘಟಕದ ಪೊಲೀಸ್ ಉಪ ಮಹಾನಿರೀಕ್ಷಕಿ ಸಂಗೀತಾ, ಮಡಿಕೇರಿ ಸಿಐಡಿ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಪವನ್ ನೆಜ್ಜೂರು ಮಾರ್ಗದರ್ಶನಲ್ಲಿ ಚಿಕ್ಕಮಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್ ಉಪನಿರೀಕ್ಷಕ ಬಾಬುದ್ದೀನ್ ಮತ್ತು ಸಿಬ್ಬಂದಿಗಳಾದ ದೇವರಾಜ, ಕೃಷ್ಣರಾಜ್ ಅರಸ್, ದಿಲೀಪ್, ನಟರಾಜ್, ಹಾಲೇಶ್, ಹೇಮಾವತಿ, ಚಾಲಕರಾದ ತಿಮ್ಮಶೆಟ್ಟಿ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net