ಹಾಂದಿ-ಬಸ್ಕಲ್ ಮಾರ್ಗವಾಗಿ ಗೆಂಡೇಹಳ್ಳಿ ಮೂಲಕ ಬೇಲೂರಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಧಾರ್ಮಿಕ ಕ್ಷೇತ್ರಗಳಾದ ರಂಭಾಪುರಿ ಪೀಠ, ಹೊರನಾಡು ,ಶೃಂಗೇರಿ ಸೇರಿದಂತೆ ಹಲವು ಪ್ರಮುಖ ಪ್ರವಾಸಿ ತಾಣಗಳಿಗೆ ಬೆಂಗಳೂರು, ಹಾಸನ ಸೇರಿದಂತೆ ಹೊರ ಜಿಲ್ಲೆ, ರಾಜ್ಯಗಳಿಂದ ಬರುವ ಪ್ರವಾಸಿಗರು ಈ ಮಾರ್ಗವಾಗಿ ಆಗಮಿಸುತ್ತಾರೆ. ಆದರೆ ರಸ್ತೆ ಅವ್ಯವಸ್ಥೆಯಿಂದ ಪ್ರಯಾಣಿಕರು ಹಿಡಿಶಾಪ ಹಾಕುತ್ತಿದ್ದಾರೆ.