ಕ್ಷಯ ರೋಗ ನಿರ್ಲಕ್ಷಿಸಿದರೆ ಪ್ರಾಣಕ್ಕೆ ಕುತ್ತು

ಚಿಕ್ಕಮಗಳೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜೇಸಿಐ ಚಿಕ್ಕಮಗಳೂರು, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯ ರೋಗ ನಿರ್ಮೂಲನ ಕೇಂದ್ರ ಸಹಯೋಗದಲ್ಲಿ ಆಯೋಜಿಸಿದ್ದ ಕ್ಷಯ ರೋಗ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾ ರಿ ಡಾ. ಬಾಲಕೃಷ್ಣ ಉದ್ಘಾಟಿಸಿದರು.
ಚಿಕ್ಕಮಗಳೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜೇಸಿಐ ಚಿಕ್ಕಮಗಳೂರು, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯ ರೋಗ ನಿರ್ಮೂಲನ ಕೇಂದ್ರ ಸಹಯೋಗದಲ್ಲಿ ಆಯೋಜಿಸಿದ್ದ ಕ್ಷಯ ರೋಗ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾ ರಿ ಡಾ. ಬಾಲಕೃಷ್ಣ ಉದ್ಘಾಟಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಮೈಕೋ ಬ್ಯಾಕ್ಟೀರಿಯಾಗಳಿಂದ ಹರಡು ವ ಆರೋಗ್ಯ ಸಮಸ್ಯೆ
  • ಕ್ಷಯ ರೋಗ ಕಾಯಿಲೆಗೆ ಚಿಕಿತ್ಸೆ ಇದ್ದರೂ ಇದನ್ನು ಸೂಕ್ತ ಸಮಯದಲ್ಲಿ ಪತ್ತೆ ಮಾಡುವುದು ಅತಿ ಅಗತ್ಯ
  • ಸಕೋಶದ ಸೋಂಕಿನಿಂದ ಕಾಯಿಲೆ ಕಾಣಿಸಿಕೊಳ್ಳಲಿದೆ
ಚಿಕ್ಕಮಗಳೂರು: ಕ್ಷಯ ರೋಗ ಎನ್ನುವುದು ಮೈಕೋ ಬ್ಯಾಕ್ಟೀರಿಯಾಗಳಿಂದ ಹರಡು ವ ಆರೋಗ್ಯ ಸಮಸ್ಯೆ. ವಾತಾವರಣದಲ್ಲಿರುವ ಮಾಲಿನ್ಯ, ಶ್ವಾಸಕೋಶದ ದೌರ್ಬಲ್ಯ ಹಾಗೂ ಸಾಂಕ್ರಾಮಿಕ ಶ್ವಾಸಕೋಶದ ಸೋಂಕಿನಿಂದ ಕಾಯಿಲೆ ಕಾಣಿಸಿಕೊಳ್ಳಲಿದೆ ಎಂದು ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾ ರಿ ಡಾ. ಬಾಲಕೃಷ್ಣ ಹೇಳಿದರು.
ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜೇಸಿಐ ಚಿಕ್ಕಮಗಳೂರು, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯ ರೋಗ ನಿರ್ಮೂಲನ ಕೇಂದ್ರ ಸಹಯೋಗದಲ್ಲಿ ಆಯೋಜಿಸಿದ್ದ ಕ್ಷಯ ರೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕ್ಷಯ ರೋಗ ಕಾಯಿಲೆಗೆ ಚಿಕಿತ್ಸೆ ಇದ್ದರೂ ಇದನ್ನು ಸೂಕ್ತ ಸಮಯದಲ್ಲಿ ಪತ್ತೆ ಮಾಡುವುದು ಅತಿ ಅಗತ್ಯ, ಹೀಗಾಗಿ ಕ್ಷಯ ರೋಗವನ್ನು ನಿರ್ಲಕ್ಷಿಸಿದರೆ ಪ್ರಾಣಕ್ಕೂ ಹಾನಿ ಮಾಡಬಹುದು. ಆದ್ದರಿಂದ ಆಗಾಗ ಆಸ್ಪತ್ರೆಗೆ ಭೇಟಿ ನೀಡಿ ಪರೀಕ್ಷೆಗೆ ಒಳಗಾಗಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಕ್ಷಯ ರೋಗ ನಿಯಂತ್ರಣ ಅಧಿಕಾರಿ ಡಾ. ಹರೀಶ್ ಬಾಬು ಪ್ರಾಸ್ತಾವಿಕವಾಗಿ ಮಾತನಾಡಿ, ಕ್ಷಯದ ಬಗ್ಗೆ ಸಾಮಾಜಿಕ ಮತ್ತು ಆರ್ಥಿಕ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಅಲ್ಲದೇ ಸಾಂಕ್ರಾಮಿಕ ರೋಗ ಕೊನೆಗೊಳಿಸಲು ಪ್ರಯತ್ನಗಳನ್ನು ಹೆಚ್ಚಿಸಿದ್ದೇವೆ ಎಂದರು.
ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಅನಿಲ್ ಆನಂದ್ ಮಾತನಾಡಿ, ಪ್ರತಿ ವರ್ಷ ಲಕ್ಷಾಂತರ ಜನ ಕ್ಷಯರೋಗಕ್ಕೆ ತುತ್ತಾಗಿ ಸಾವನ್ನಪ್ಪುತ್ತಿದ್ದಾರೆ. ಆದರೆ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ಯನ್ನು ಪಡೆದುಕೊಳ್ಳುವ ಮೂಲಕ ರೋಗವನ್ನು ಸಂಪೂರ್ಣವಾಗಿ ಗುಣಪಡಿಸಬಹುದು ಮತ್ತು ತಡೆಗಟ್ಟಬಹುದು ಎಂದರು.
ಜೇಸಿಐ ಅಧ್ಯಕ್ಷ ತಿಲಕ್‌ದತ್ ಮಾತನಾಡಿ, ಕ್ಷಯಾ ರೋಗ ಎಂದು ಹೇಳಿದ ತಕ್ಷಣ ಜನರಲ್ಲಿ ಆತಂಕ ಉಂಟಾಗುವ ಕಾಲವೊಂದಿತ್ತು. ಕಾಲ ಬದಲಾದಂತೆ ಚಿಕಿತ್ಸೆ ಪಡೆದರೆ ಕ್ಷಯ ಸಂಪೂರ್ಣವಾಗಿ ಗುಣವಾಗುತ್ತದೆ ಎಂಬ ನಂಬಿಕೆ ಬಂದಿದೆ. ೧೮೮೨ ರಲ್ಲಿ ರಾಬರ್ಟ್ ಕಾಕ್ ಅವರು ಕ್ಷಯ ರೋಗಕ್ಕೆ ಮೈಕೋ ಬ್ಯಾಕ್ಟೀರಿಯಾ ಟ್ಯೂಬರ್ ಕ್ಯೂಲೋಸಿಸ್ ಎಂಬ ರೋಗಾಣುಕಾರಣೆ ಎಂದು ಪತ್ತೆ ಹಚ್ಚಿದರು ಎಂದು ಹೇಳಿದರು.
ಇದೇ ವೇಳೆ ಜೆಸಿಐ ಮಲ್ನಾಡ್ ಚಿಕ್ಕಮಗಳೂರು ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಸ್ಟೈನ್ ಲೆಸ್ ಸ್ಟೀಲ್ ನೀರಿನ ಬಾಟಲಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಡಾ. ಸೀಮಾ, ಪಿಪಿಎಎಂ ಸಂಯೋಜಕರಾದ ಕಿರಣ್ ಕುಮಾರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬೇಬಿ, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿ ರುಚಿಯಾ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net