ಹೆಚ್ಚುವರಿ ಶಾಲಾ ಕೊಠಡಿ ನಿರ್ಮಾಣಕ್ಕೆ ಶೀಘ್ರ ಕ್ರಮ

ಬಾಳೆಹೊನ್ನೂರು ಸರ್ಕಾರಿ ಪ್ರೌಢಶಾಲೆಯ ಮೂಲ ಸೌಕರ್ಯಗಳ ಬಗ್ಗೆ ಶಾಸಕ ಟಿ.ಡಿ.ರಾಜೇಗೌಡ ಪರಿಶೀಲಿಸಿದರು.
ಬಾಳೆಹೊನ್ನೂರು ಸರ್ಕಾರಿ ಪ್ರೌಢಶಾಲೆಯ ಮೂಲ ಸೌಕರ್ಯಗಳ ಬಗ್ಗೆ ಶಾಸಕ ಟಿ.ಡಿ.ರಾಜೇಗೌಡ ಪರಿಶೀಲಿಸಿದರು.
Published on
ಬಾಳೆಹೊನ್ನೂರು: ಪಟ್ಟಣದ ಸರ್ಕಾರಿ ಪ್ರೌಢಶಾಲೆಯ ವಿವಿಧ ಮೂಲ ಸೌಕರ್ಯಗಳ ಕುರಿತು ಶಾಸಕ ಟಿ.ಡಿ.ರಾಜೇಗೌಡ ಎಸ್‌ಡಿಎಂಸಿ ಸದಸ್ಯರೊಂದಿಗೆ ಪರಿಶೀಲನೆ ನಡೆಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಪಟ್ಟಣದ ಸರ್ಕಾರಿ ಪ್ರೌಢಶಾಲೆ ಕೆಪಿಎಸ್ ಶಾಲೆಯಾಗಿ ಮೇಲ್ದರ್ಜೆಗೇರಲು ಈಗಾಗಲೇ ಸರ್ಕಾರದಿಂದ ಅಧಿಸೂಚನೆಯಾಗಿದೆ. ಶಾಲೆಗೆ ಇನ್ನಷ್ಟು ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕಿದೆ. ಸರ್ಕಾರಿ ಪ್ರೌಢಶಾಲೆಯಲ್ಲಿ ಈಗಾಗಲೇ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ವಿದ್ಯಾರ್ಥಿಗಳ ಕೊಠಡಿ ಸಮಸ್ಯೆ ಎದುರಾಗಿದೆ. ಹಾಗಾಗಿ ಕೊಠಡಿಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕಿದೆ. ಕೆಪಿಎಸ್ ಶಾಲೆಯಾಗಿ ಮೇಲ್ದರ್ಜೆಗೇರಲು ಯಾವುದಾದರೂ ಖಾಸಗಿ ಸಂಸ್ಥೆಗಳ ಸಿಎಸ್‌ಆರ್ ನಿಧಿ ಬಳಸಿಕೊಂಡು ಶಾಲೆ ಅಭಿವೃದ್ಧಿ ಮಾಡಬೇಕು. ಮೂರು ವರ್ಷಗಳ ನಂತರ ಸರ್ಕಾರ ಶಾಲೆಯನ್ನು ನಿರ್ವಹಣೆ ಮಾಡಲಿದೆ ಎಂದು ತಿಳಿಸಿದರು.
ಎಸ್‌ಡಿಎಂಸಿ ಅಧ್ಯಕ್ಷ ಎಂ.ಜೆ.ಮಹೇಶ್ ಆಚಾರ್ಯ, ಸದಸ್ಯ ಮಯ್ಯದ್ದಿ, ಗ್ರಾಪಂ ಮಾಜಿ ಅಧ್ಯಕ್ಷ ಮಹಮ್ಮದ್ ಹನ್ೀ, ಬಿ.ಕೆ.ಮಧುಸೂದನ್, ಜಾನ್ ಡಿಸೋಜಾ, ಕಾಂಗ್ರೆಸ್ ವಕ್ತಾರ ಹಿರಿಯಣ್ಣ, ಇಬ್ರಾಹಿಂ, ಮುಖ್ಯಶಿಕ್ಷಕ ಕೊಟ್ರೇಶಪ್ಪ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net